ನವದೆಹಲಿ, ಮೇ 12 (Daijiworld News/MB) : ಕೊರೊನಾ ಲಾಕ್ಡೌನ್ನಿಂದಾಗಿ ತೀವ್ರ ಆರ್ಥಿಕ ಸಂಕಷ್ಟದಲ್ಲಿರುವ ಸಣ್ಣ ಮತ್ತು ಮಧ್ಯಮ ಉದ್ಯಮಗಳಿಗೆ ಸಾರ್ವಜನಿಕ ಸ್ವಾಮ್ಯದ ಬ್ಯಾಂಕ್ಗಳು 5.95 ಲಕ್ಷ ಕೋಟಿ ರೂ ಸಾಲ ಮಂಜೂರು ಮಾಡಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಮಾರ್ಚ್ 1ರಿಂದ ಮೇ 8ರವರೆಗೆ ಕಂಪೆನಿ ಕಾಯ್ದೆಯಡಿ ನೋಂದಣಿಯಾಗಿರುವ ಬ್ಯಾಂಕಿಂಗೇತರ ಹಣಕಾಸು ಸಂಸ್ಥೆಗಳು ಸಹ 1.18 ಲಕ್ಷ ಕೋಟಿ ರೂಪಾಯಿ ಸಾಲ ಒದಗಿಸಿವೆ. 65 ಸಾವಿರದ 879 ಕೋಟಿ ರೂಪಾಯಿ ಮೊತ್ತದ ತುರ್ತು ಸಾಲ ಮತ್ತು ದುಡಿಯುವ ಬಂಡವಾಳವನ್ನು ಶೇ 97 ರಷ್ಟು ಅರ್ಹ ಸಾಲಗಾರರಿಗೆ ಒದಗಿಸಲಾಗಿದೆ ಎಂದು ಹೇಳಿದ್ದಾರೆ.
ಏತನ್ಮಧ್ಯೆ 15ನೇ ಹಣಕಾಸು ಆಯೋಗದಡಿ ಕೇಂದ್ರ ಹಣಕಾಸು ಸಚಿವಾಲಯ 14 ರಾಜ್ಯಗಳಿಗೆ 6,195 ಕೋಟಿ ರೂಪಾಯಿ ಹಣವನ್ನು ಬಿಡುಗಡೆ ಮಾಡಿದೆ.