ಬೆಂಗಳೂರು, ಮೇ 13 (Daijiworld News/MB) : ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ವಿವಾಹಕ್ಕಾಗಿ ಎಷ್ಟು ವಾಹನಗಳಿಗೆ ನೀಡಲಾಗಿತ್ತು ಎಂದು ಹೈಕೋರ್ಟ್ ರಾಜ್ಯ ಸರ್ಕಾರವನ್ನು ಪ್ರಶ್ನಿಸಿದೆ.
ಅನುಮತಿ ನೀಡುವ ಮುನ್ನ ಜಿಲ್ಲಾಧಿಕಾರಿ ವಾಹನಗಳ ಸಂಖ್ಯೆ ನಮೂದಿಸಿಲ್ಲ. ವಿವಾಹದಲ್ಲಿ ಪಾಲ್ಗೊಳ್ಳುವುದಕ್ಕೆ ಜನರ ಮಿತಿ ನಿಗದಿ ಮಾಡಬೇಕು. ಕೇಂದ್ರದ ಮಾರ್ಗಸೂಚಿಯಂತೆ ವಿವಾಹ ನಿಯಂತ್ರಣಕ್ಕೆ ಡಿಸಿಗೆ ಅಧಿಕಾರವಿತ್ತು. ಆದರೆ ಏ.15. ರ ಮಾರ್ಗಸೂಚಿಯಲ್ಲಿ ವಿವಾಹಕ್ಕೆ ಸಂಖ್ಯಾ ಮಿತಿ ನಿಗದಿಪಡಿಸಿರಲಿಲ್ಲ. ಮೇ.1 ರ ಮಾರ್ಗಸೂಚಿಯಲ್ಲಿ 50 ಜನರ ಮಿತಿ ನಿಗದಿಪಡಿಸಲಾಗಿತ್ತು. ಈ ಕಾರಣದಿಂದ ಏ.17 ರಂದು ನಡೆದ ನಿಖಿಲ್ ವಿವಾಹಕ್ಕೆ ಸಂಖ್ಯಾ ಮಿತಿ ವಿಧಿಸಬೇಕಿತ್ತು ಎಂದು ಹೈಕೋರ್ಟ್ ಹೇಳಿದೆ.
ಈ ಸಂದರ್ಭದಲ್ಲಿ ಇನ್ನು ಮುಂದೆ ಈ ರೀತಿಯಾಗಿ ಲೋಪವಾಗದಂತೆ ನೋಡಿಕೊಳ್ಳಲಾಗುವುದು ಎಂದು ಸರ್ಕಾರಿ ವಕೀಲ ವಿಕ್ರಮ್ ಹುಯಿಲಗೋಳ ಹೈಕೋರ್ಟ್ಗೆ ತಿಳಿಸಿದ್ದು ಆದರೆ ವಾಹನಗಳಿಗೆ ನೀಡಲಾದ ಪಾಸ್ ಕುರಿತಾಗಿ ಮಾಹಿತಿ ನೀಡಬೇಕು ಎಂದು ಹೈಕೋರ್ಟ್ ಹೇಳಿದೆ.
ಲಾಕ್ಡೌನ್ ಸಂದರ್ಭದಲ್ಲಿ ನಿಖಿಲ್ ವಿವಾಹ ನಡೆದಿದ್ದು ಈ ವಿವಾಹದ ಸಂದರ್ಭದಲ್ಲಿ ಲಾಕ್ಡೌನ್ ಉಲ್ಲಂಘನೆಯಾಗಿದೆ ಎಂದು ಹೈಕೋರ್ಟ್ ಈ ಹಿಂದೆ ತಿಳಿಸಿತ್ತು.