ಬೆಂಗಳೂರು, ಮೇ 13 (Daijiworld News/MB) : ಪ್ರಸ್ತುತ ವರ್ಷದ ಸಿಇಟಿ ಪರೀಕ್ಷೆಗಳು ಜುಲೈ 30, 31ರಂದು ನಡೆಯಲಿವೆ ಎಂದು ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ್ ತಿಳಿಸಿದ್ದಾರೆ.
ಈ ಕುರಿತಾಗಿ ವಿಧಾನಸೌಧದಲ್ಲಿ ಮಾತನಾಡಿದ ಅವರು, ಹಾಲಿ ವರ್ಷದ ಸಿಇಟಿ ಪರೀಕ್ಷೆಗಳು 30, 31ರಂದು ನಡೆಯಲಿವೆ. ಹಾಗೆಯೇ ಬೇಗ ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆಯನ್ನು ನಡೆಸಲಾಗುವುದು. ಶೀಘ್ರದಲ್ಲೇ ಪಿಯು ಮಂಡಳಿ ವೇಳಾಪಟ್ಟಿ ಪ್ರಕಟಿಸಲಿದೆ ಎಂದು ಹೇಳಿದ್ದಾರೆ.
ಇನ್ನು ಡಿಗ್ರಿ ಕಾಲೇಜುಗಳಿಗೆ ಸೆಪ್ಟೆಂಬರ್ನಲ್ಲಿ ಶೈಕ್ಷಣಿಕ ವರ್ಷ ಆರಂಭಿಸಲು ಚಿಂತನೆ ನಡೆಸಲಾಗಿದೆ. ಮೇ ಅಂತ್ಯದೊಳಗೆ ಉನ್ನತ ಶಿಕ್ಷಣ ಇಲಾಖೆಗೆ ಸಂಬಂಧಪಟ್ಟ ಎಲ್ಲಾ ಪರೀಕ್ಷೆಗಳಿಗೆ ವಿದ್ಯಾರ್ಥಿಗಳಿಗೆ ಆನ್ಲೈನ್ನಲ್ಲೇ ಪಠ್ಯ ಚಟುವಟಿಕೆ ಮುಗಿಸಲು ಸೂಚಿಸಲಾಗಿದೆ. ಈ ಬಾರೀ ಪರೀಕ್ಷಾ ಕೇಂದ್ರಗಳು ಹೆಚ್ಚಾಗಲಿದೆ ಎಂದು ತಿಳಿಸಿದ್ದಾರೆ.
ಎಪ್ರಿಲ್ 22, 23, 24 ರಂದು ನಡೆಯಬೇಕಾಗಿದ್ದ ಸಿಇಟಿ ಪರೀಕ್ಷೆ ಕೊರೊನಾ ಲಾಕ್ಡೌನ್ ಕಾರಣದಿಂದಾಗಿ ಮುಂದೂಡಲಾಗಿತ್ತು.