ರಾಮನಗರ, ಮೇ 14 (Daijiworld News/MB) : ಮಾಜಿ ಭೂಗತ ದೊರೆ, ಜಯ ಕರ್ನಾಟಕ ಸಂಘಟನೆಯ ಸಂಸ್ಥಾಪಕ ಮುತ್ತಪ್ಪ ರೈ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಸ್ತುತ ವೆಂಟಿಲೇಟರ್ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ವರದಿ ತಿಳಿಸಿದೆ.
ಈ ಕುರಿತು ಮಾಹಿತಿ ನೀಡಿರುವ ಪೂರ್ವ ವಲಯ ಡಿಸಿಪಿ ಶರಣಪ್ಪ, "ಮುತ್ತಪ್ಪ ರೈ ಸ್ಥಿತಿ ಚಿಂತಾಜನಕವಾಗಿದ್ದು ಆಸ್ಪತ್ರೆಯ ವೈದ್ಯರು ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಲಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಬರುತ್ತಿರುವ ಅವರ ನಿಧನದ ಸುದ್ದಿ ಸುಳ್ಳು. ಕಳೆದ ಕೆಲವು ದಿನಗಳಿಂದ ಮಣಿಪಾಲದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ" ಎಂದು ತಿಳಿಸಿದ್ದಾರೆ.
ಇನ್ನು ಅವರ ಸಂಬಂಧಿ ಪ್ರಕಾಶ್ ರೈ, "ಮುತ್ತಪ್ಪ ರೈ ಅವರು ಆರೋಗ್ಯವಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಕೆಲವು ಕಿಡಿಗೇಡಿಗಳು ಹಬ್ಬಿಸಿರುವ ಸುದ್ದಿ ಸುಳ್ಳು" ಎಂದು ತಿಳಿಸಿದ್ದಾರೆ.
ಮುತ್ತಪ್ಪ ರೈ ಅವರು ಕ್ಯಾನ್ಸರ್ನಿಂದ ಬಳಲುತ್ತಿದ್ದು ವರ್ಷದಿಂದಲೂ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.