ಶ್ರೀನಗರ, ಮೇ 14 (Daijiworld News/MSP): ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಯಮರಾಚ್ ಗ್ರಾಮದಲ್ಲಿ ಬುಧವಾರ ರಾತ್ರಿಯಿಂದ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ಆರಂಭವಾಗಿದೆ.
ವಿವರಗಳ ಪ್ರಕಾರ, ಈ ಪ್ರದೇಶದಲ್ಲಿ ಉಗ್ರರು ಅಡಗಿರುವ ಬಗ್ಗೆ ಮಾಹಿತಿ ಪಡೆದು ಜಮ್ಮು ಮತ್ತು ಕಾಶ್ಮೀರ ಪೊಲೀಸರು, ಭಾರತೀಯ ಸೇನಾ ಪಡೆಗೆ ಮಾಹಿತಿ ರವಾನಿಸಿದ್ದರು.
ಭದ್ರತಾ ಪಡೆಗಳ ಹಾಗೂ ಪೊಲೀಸರ ಜಂಟಿ ತಂಡವು ಶಂಕಿತ ಸ್ಥಳವನ್ನು ಸಮೀಪಿಸುತ್ತಿದ್ದಂತೆ, ಅಡಗಿದ್ದ ಉಗ್ರರು ಭದ್ರತಾ ಪಡೆಗಳ ಮೇಲೆ ಗುಂಡು ಹಾರಿಸಲಾರಂಭಿಸಿದ್ದು, ಇದಕ್ಕೆ ಪ್ರತಿಯಾಗಿ ಯೋಧರು ಪ್ರತಿದಾಳಿ ಆರಂಭಿಸಿದ್ದಾರೆ.
ಉಗ್ರರು ತಪ್ಪಿಸಿಕೊಳ್ಳದಂತೆ ಈ ಪ್ರದೇಶದ ಎಲ್ಲಾ ಹೊರಹೋಗುವ ದಾರಿಗಳನ್ನು ಮುಚ್ಚಲಾಗಿದೆ. ಇದು ಪೊಲೀಸರು ಮತ್ತು ಸೇನೆಯ ಜಂಟಿ ಕಾರ್ಯಾಚರಣೆಯಾಗಿದೆ.