ನವದೆಹಲಿ, ಮೇ 14 (Daijiworld News/MSP): ಕೇಂದ್ರ ವಿತ್ತೆ ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಸಂಜೆ 4 ಗಂಟೆ ದೆಹಲಿಯಲ್ಲಿ ಪತ್ರಿಕಾಗೋಷ್ಟಿ ನಡೆಸಲಿದ್ದಾರೆ.
ಪ್ರಧಾನಿ ಮೋದಿ ಘೋಷಣೆ ಮಾಡಿದ್ದ 20 ಲಕ್ಷ ಕೋಟಿ ಆರ್ಥಿಕ ಪ್ಯಾಕೇಜ್ಗೆ ಸಂಬಂಧಿಸಿದಂತೆ ಎರಡನೇ ಹಂತ ಯೋಜನೆಗಳನ್ನು ಪ್ರಕಟಿಸುವ ಉದ್ದೇಶದಿಂದ ನಿರ್ಮಲಾ ಅವರು ಇಂದು ೪ ಗಂಟೆಗೆ ಪತ್ರಿಕಾಗೋಷ್ಟಿ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.
ಮುಂದಿನ ಕೆಲವು ಸಮಯದಲ್ಲಿ ಭಾರತವನ್ನು ಸ್ವಾವಲಂಬಿಯನ್ನಾಗಿ ಮಾಡಬೇಕು ಎಂಬ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ"ಆತ್ಮ ನಿರ್ಭರ್ ಅಭಿಯಾನ"ದ ಹೆಸರಿನಲ್ಲಿ 20 ಲಕ್ಷ ಕೋಟಿ ರೂಪಾಯಿ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದ್ದರು. "ಆತ್ಮನಿರ್ಭರ ಭಾರತ್ ಅಭಿಯಾನ" ದ 20 ಲಕ್ಷ ಕೋಟಿ ರೂಪಾಯಿ ಪ್ಯಾಕೇಜನ್ನು ಹೇಗೆ ಹಂಚಲಾಗುತ್ತಿದೆ ಎಂಬುದ ಮೊದಲ ಹಂತದ ವಿವರಣೆಯನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ವಿತ್ತ ಖಾತೆಯ ರಾಜ್ಯ ಸಚಿವ ಅನುರಾಗ್ ಠಾಕೂರ್ ಬುಧವಾರ ಸಂಜೆ ನೀಡಿದ್ದರು.
ಇದರ ಮುಂದುವರಿದ ಭಾಗವಾಗಿ ಇಂದು ಎರಡನೇ ಹಂತದ ವಿವರಣೆಯನ್ನು ಅವರು ಗುರುವಾರ ಸಂಜೆ 4 ಗಂಟೆಗೆ ನೀಡುವ ನಿರೀಕ್ಷೆ ಇದೆ. ಕೃಷಿ ಕ್ಷೇತ್ರ ಮತ್ತು ಸಂಬಂಧಿತ ಚಟುವಟಿಕೆಗಳ ಬಗ್ಗೆ ಹಣಕಾಸು ಸಚಿವರು ಇಂದು ದೊಡ್ಡ ಘೋಷಣೆ ಮಾಡುವ ಸಾಧ್ಯತೆಯಿದೆ.