ಲಕ್ನೊ, ಮೇ 14 (Daijiworld News/MB) : ಕಳೆದ ರಾತ್ರಿ ಮಧ್ಯ ಪ್ರದೇಶದ ಗುನಾ ಎಂಬಲ್ಲಿ ಅಪಘಾತದಿಂದ ಮೃತಪಟ್ಟ ಉತ್ತರ ಪ್ರದೇಶ ಮೂಲದ ವಲಸೆ ಕಾರ್ಮಿಕರ ಕುಟುಂಬಕ್ಕೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ತಲಾ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಹಾಗೆಯೇ ಗಂಭೀರ ಗಾಯಗೊಂಡವರಿಗೆ ತಲಾ 50 ಸಾವಿರ ರೂಪಾಯಿ ಪರಿಹಾರ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಕಳೆದ ರಾತ್ರಿಯಲ್ಲಿ ಎರಡು ಪ್ರತ್ಯೇಕ ರಸ್ತೆ ಅಪಘಾತದಲ್ಲಿ ಮೃತಪಟ್ಟ ಕಾರ್ಮಿಕರಲ್ಲಿ ಮುಜಾಫರ್ ನಗರದಲ್ಲಿ ಮೃತಪಟ್ಟವರು ಬಿಹಾರ ಮೂಲದವರಾಗಿದ್ದು ಅವರು ಎಲ್ಲಿಂದ ಎಲ್ಲಿಗೆ ಹೋಗುತ್ತಿದ್ದರು ಎಂಬ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಇಲ್ಲಿ ಆರು ಮಂದಿ ಮೃತಪಟ್ಟಿದ್ದು ಗಂಭೀರವಾಗಿ ಗಾಯವಾದ ಇಬ್ಬರನ್ನು ಮೀರತ್ನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅಪಘಾತ ಮಾಡಿದ ವಾಹನದ ಚಾಲಕ ಸ್ಥಳದಲ್ಲಿಯೇ ವಾಹನ ಬಿಟ್ಟು ವಾಹನ ಬಿಟ್ಟು ಪರಾರಿಯಾಗಿದ್ದು ಆತನ ವಿರುದ್ಧ ನಿರ್ಲಕ್ಷ್ಯತನದಿಂದ ವಾಹನ ಚಲಾಯಿಸಿದ್ದಕ್ಕಾಗಿ ಅವನ ವಿರುದ್ಧ ದಾಖಲಿಸಲಾಗಿದೆ ಎಂದು ಮುಜಾಫರ್ ನಗರದ ಕೊಟ್ವಾಲಿ ಪೊಲೀಸ್ ಠಾಣೆಯ ಅಧಿಕಾರಿ ಅನಿಲ್ ಕಪರ್ವಾನ್ ತಿಳಿಸಿದ್ದಾರೆ.
ಇನ್ನು ಉತ್ತರ ಪ್ರದೇಶ ಮೂಲದವರಾದ ಕಾರ್ಮಿಕರ ಮೃತ ದೇಹವನ್ನು ಕುಟುಂಬಸ್ಥರ ಬಳಿ ತರಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಕಾರ್ಯಾಲಯ ತಿಳಿಸಿದೆ.