ಬೆಂಗಳೂರು, ಮೇ 14 (DaijiworldNews/PY) : ರಂಜಾನ್ ಹಿನ್ನೆಲೆ ಈದ್ಗಾ ಮೈದಾನದಲ್ಲಿ ಮುಸ್ಲಿಂ ಸಮುದಾಯಕ್ಕೆ ನಮಾಜ್ ಮಾಡಲು ಅವಕಾಶ ಮಾಡಿಕೊಡಬೇಕು ಎಂದು ಮುಖ್ಯಮಂತ್ರಿಗಳಿಗೆ ಕಾಂಗ್ರೆಸ್ ನಾಯಕ ಸಿ.ಎಂ.ಇಬ್ರಾಹಿಂ ಪತ್ರ ಬರೆದಿದ್ದಾರೆ.
ಮೇ 24 ಹಾಗೂ 25 ರಂದು ರಂಜಾನ್ ಆಚರಣೆ ಇದ್ದು, ಈ ಸಂದರ್ಭ ವಿಶೇಷ ಪ್ರಾರ್ಥನೆ ಮಾಡಬೇಕಾಗುತ್ತದೆ. ಹಾಗಾಗಿ ಇಡೀ ಮುಸ್ಲಿಂ ಸಮುದಾಯದ ಪರವಾಗಿ ನಿಮ್ಮಲ್ಲಿ ನಾನು ಮನವಿ ಮಾಡಿಕೊಳ್ಳುತ್ತಿದ್ದೇನೆ. ರಂಜಾನ್ ದಿನದಂದು ಮುಂಜಾಗ್ರತಾ ಕ್ರಮ ತೆಗೆದುಕೊಂಡು ಪ್ರಾರ್ಥನೆ ಮಾಡಲು ಬೆಳಗ್ಗಿನಿಂದ ಮಧ್ಯಾಹ್ನ 1 ಗಂಟೆವರೆಗೆ ಅವಕಾಶ ಕಲ್ಪಿಸಬೇಕೆಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಮೆಡಿಕಲ್ ತಜ್ಞರೊಂದಿಗೆ ಸಮಾಲೋಚನೆ ನಡೆಸಿ ಸಿಎಂ ಅವರು ರಾಜ್ಯಾದ್ಯಂತ ಎಲ್ಲಾ ಮುಸ್ಲಿಂಮರಿಗೆ ಈದ್ಗಾ ಮೈದಾನದಲ್ಲಿ ಪ್ರಾರ್ಥನೆ ಮಾಡಲು ಅವಕಾಶ ಕಲ್ಪಿಸಬೇಕು ಎಂದು ಪತ್ರದ ಮೂಲಕ ಮನವಿ ಮಾಡಿಕೊಂಡಿದ್ದಾರೆ.