ನವದೆಹಲಿ, ಮೇ 16 (DaijiworldNews/PY) : ಇಂದು ಸಂಜೆ 4 ಗಂಟೆಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ₹20 ಲಕ್ಷ ಕೋಟಿ ಪ್ಯಾಕೇಜ್ ಘೋಷಿಸಿದ ಬಳಿಕ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕರೆದ ನಾಲ್ಕನೇ ಸುದ್ದಿಗೋಷ್ಠಿಯಿದಾಗಿದೆ.
ಕೊರೊನಾ ವೈರಸ್ಗೆ ತತ್ತರಿಸಿರುವ ದೇಶಕ್ಕೆ ಕೇಂದ್ರವು ನೀಡಲು ಉದ್ದೇಶಿಸಿರುವ ಪರಿಹಾರ ಕ್ರಮಗಳ ಮೂರನೇ ಕಂತಿನ ವಿವಿರಗಳ ಬಗ್ಗೆ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಾತನಾಡಿದ್ದರು.
ಕೃಷಿ ಹಾಗೂ ಸಂಬಂಧಪಟ್ಟ ಕ್ಷೇತ್ರಗಳಿಗೆ ಒಟ್ಟು ಎಂಟು ಉಪಕ್ರಮಗಳನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಪ್ರಕಟಿಸಿದ್ದರು.