ರಾಮನಗರ, ಮೇ 16 (DaijiworldNews/PY) : ಭೂಗತ ದೊರೆ, ಜಯ ಕರ್ನಾಟಕ ಸಂಘಟನೆಯ ಸಂಸ್ಥಾಪಕ ಮುತ್ತಪ್ಪ ರೈ ಅಂತ್ಯಕ್ರಿಯೆಯ ಸಂದರ್ಭ ಗಾಳಿಯಲ್ಲಿ ಗುಂಡು ಹಾರಿಸಿದ್ದ ಪ್ರಕರಣದ ಸಂಬಂಧ 7 ಜನರನ್ನು ಬಿಡದಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು, ರಂಜಿತ್ ರೈ, ಪ್ರಕಾಶ್ ರೈ, ಲಕ್ವಿರ್ ಸಿಂಗ್, ಸುನಿಲ್, ಮೋನಪ್ಪ, ಚಾತರ್ ಸಿಂಗ್ ಹಾಗೂ ಗಿರೀಶ್ ಎನ್ನಲಾಗಿದೆ. ಆರೋಪಿಗಳು ಹಾರಿಸಲು ಬಳಸಿದ್ದ ಶಸ್ತ್ರಾಸ್ತ್ರಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಅಂತ್ಯಕ್ರಿಯೆ ಸಂದರ್ಭ ಸೆಕ್ಯುರಿಟಿಗಳು ಗಾಳಿಯಲ್ಲಿ ಗುಂಡು ಹಾರಿಸಿದ್ದು, ಈ ವೇಳೆ ಕಾನೂನು ಉಲ್ಲಂಘನೆ ತಡೆಗಟ್ಟುವಲ್ಲಿ ಆಯೋಕರು ವಿಫಲರಾಗಿದ್ದರು. ಬಿಡದಿ ಠಾಣೆಯಲ್ಲಿ ಆರ್ಮ್ಸ್ ಆಕ್ಟ್ ಅಡಿ ಈ ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದೆ. ಆಯೋಜಕ ಪ್ರಕಾಶ್. ರೈ ಸೇರಿದಂತೆ ಏಳು ಜನರನ್ನು ಬಂಧಿಸಿದ್ದು, ಆರೋಪಿಗಳಿಂದ ಶಸ್ತ್ರಾಸ್ತ್ರಗಳನ್ನು ಜಪ್ತಿ ಮಾಡಲಾಗಿದ್ದು. ಆರೋಪಿಗಳನ್ನು ನ್ಯಾಯಾಲಯದಲ್ಲಿ ಹಾಜರುಪಡಿಸಲಾಗುವುದು ಎಂದು ಬಿಡದಿ ಪೊಲೀಸರು ಹೇಳಿದ್ದಾರೆ.
ಜಯ ಕರ್ನಾಟಕ ಸಂಘಟನೆಯ ಸಂಸ್ಥಾಪಕ ಮುತ್ತಪ್ಪ ರೈ (68) ಅವರು ಕ್ಯಾನ್ಸರ್ನಿಂದ ಬಳಲುತ್ತಿದ್ದರು. ಹಾಗಾಗಿ ಅವರು ಮಣಿಪಾಲ್ ಆಸ್ಪತ್ರೆಯಲ್ಲಿ ಅನೇಕ ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಿಸದೇ ಶುಕ್ರವಾರ ಮುಂಜಾನೆ ಸುಮಾರು 2:10ಕ್ಕೆ ಮೃತಪಟ್ಟಿದ್ದು, ಅವರ ಅಂತ್ಯಕ್ರಿಯೆ ರಾಮನಗರ ಜಿಲ್ಲೆಯ ಬಿಡದಿಯ ತೋಟದ ಮನೆಯಲ್ಲಿ ನೆರವೇರಿತು. ತಂದೆ ಮುತ್ತಪ್ಪ ರೈ ಚಿತೆಗೆ ಕಿರಿಯ ಮಗ ರಿಕಿ ರೈ ಅಗ್ನಿಸ್ಪರ್ಶ ಮಾಡಿದರು. ಈ ಸಂದಬ್ ಮುತ್ತಪ್ಪ ರೈ ಅವರ ಬೆಂಬಲಿಗರು ಕುಶಾಲತೋಪಿನ ರೀತಿಯಲ್ಲಿ ಐದು ಬಾರಿ ಗಾಳಿಯಲ್ಲಿ ಗುಂಡು ಹಾರಿಸಿ ಗೌರವ ಸಲ್ಲಿಸಿದ್ದರು. ಈ ವಿಚಾರವಾಗಿ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಯಾಗಿತ್ತು.