ಜಮ್ಮು, ಮೇ 17 (Daijiworld News/MB) : ಜಮ್ಮು-ಕಾಶ್ಮೀರದ ರಂಬನ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂ ಕುಸಿತ ಉಂಟಾದ ಪರಿಣಾಮ ಈವರೆಗೆ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಈ ಕುರಿತು ಮಾಹಿತಿ ನೀಡಿರುವ ಅಧಿಕಾರಿಗಳು ಈವರೆಗೆ 8 ಮಂದಿಯನ್ನು ರಕ್ಷಣೆ ಮಾಡಲಾಗಿದ್ದು ಈ ಸಂದರ್ಭದಲ್ಲಿ ಅವಶೇಷಗಳಡಿಯಲ್ಲಿ ರಕ್ಷಣಾ ಕಾರ್ಯಕರ್ತನೇ ಸಿಲುಕಿರುವ ಅನುಮಾನ ಉಂಟಾಗಿದ್ದು ಶೋಧ ಕಾರ್ಯ ಮುಂದುವರೆದಿದೆ ಎಂದು ತಿಳಿಸಿದ್ದಾರೆ.
ರಂಬನ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂ ಕುಸಿತ ಉಂಟಾದ ಪರಿಣಾಮದಿಂದಾಗಿ ಕಾಶ್ಮೀರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಕಡಿತವಾಗಿದ್ದು ಇದರಿಂದಾಗಿ ಟ್ರಕ್ ಮತ್ತು ಅಗೆಯುವ ಯಂತ್ರಗಳಾದಂತಹ ಒಟ್ಟು 9 ವಾಹನಗಳಿಗೆ ಹಾನಿಯಾಗಿದೆ ಎಂದು ವರದಿ ತಿಳಿಸಿದೆ.