ಹೈದರಾಬಾದ್, ಮೇ 17 (Daijiworld News/MB) : ಕೊರೊನಾ ಸೋಂಕು ಎಲ್ಲೆಡೆ ಹರಡುತ್ತಿರುವ ಸಂದರ್ಭದಲ್ಲೇ ಬರ್ತ್ ಡೇ ಪಾರ್ಟಿ ಮಾಡಿದ್ದು ಈ ಪಾರ್ಟಿಯಲ್ಲಿ ಭಾಗಿಯಾಗಿದ್ದ ಹೈದರಾಬಾದ್ನ ಅಪಾರ್ಟ್ಮೆಂಟ್ ಒಂದರಲ್ಲಿ 25 ಮಂದಿಗೆ ಕೊರೊನಾ ಸೋಂಕು ತಗುಲಿದೆ.
ಒಂದೇ ಅಪಾರ್ಟ್ಮೆಂಟ್ನ 25 ಮಂದಿಗೆ ಕೊರೊನಾ ದೃಢಪಟ್ಟಿದ್ದು ಇವರೆಲ್ಲರೂ ಒಂದು ಬರ್ತ್ಡೇ ಪಾರ್ಟಿಯಲ್ಲಿ ಭಾಗಿಯಾಗಿದ್ದರು. ಪ್ರಸ್ತುತ ಎಲ್ಲರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು ಸೋಂಕಿತರೆಲ್ಲರ ಟ್ರಾವೆಲ್ ಹಿಸ್ಟರಿ ಕುರಿತು ಅಧಿಕಾರಿಗಳು ಮಾಹಿತಿ ಕಲೆ ಹಾಕುತ್ತಿದ್ದಾರೆ. ಹಾಗೆಯೇ ಇವರ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಕ್ಕೆ ಬಂದ ಎಲ್ಲರಿಗೆ ಕ್ವಾರಂಟೈನ್ಗೆ ವ್ಯವಸ್ಥೆ ಮಾಡಲಾಗಿದೆ ಎಂದು ವರದಿ ತಿಳಿಸಿದೆ.
ಈ ಮೊದಲು ಹೈದರಾಬಾದ್ನಲ್ಲೇ ಬರ್ತ್ಡೇ ಪಾರ್ಟಿಯಲ್ಲಿ ಭಾಗಿಯಾಗಿದ್ದ 45 ಮಂದಿಗೆ ಕೊರೊನಾ ದೃಢಪಟ್ಟಿರುವ ಬಗ್ಗೆ ವರದಿಯಾಗಿತ್ತು.
ಪ್ರಸ್ತುತ ತೆಲಂಗಾಣದಲ್ಲಿ 1454 ಸೋಂಕು ಪ್ರಕರಣಗಳಿದ್ದು, 959 ಮಂದಿ ಗುಣಮುಖರಾಗಿದ್ದಾರೆ, 34 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.