ಸಿಮ್ದೇಗಾ, ಮೇ 17 (Daijiworld News/MB) : ಪೊಲೀಸರು ಜಾರ್ಖಾಂಡ್ನ ಸಿಂಮ್ದೇಗಾ ಜಿಲ್ಲೆಯಲ್ಲಿ ಎನ್ಕೌಂಟರ್ ನಡೆಸಿ ಓರ್ವ ನಕ್ಸಲ್ನನ್ನು ಹತ್ಯೆಗೈದಿರುವುದಾಗಿ ವರದಿಯಾಗಿದೆ.
ನಕ್ಸಲರು ಸಿಮ್ದೇಗಾ ಜಿಲ್ಲೆಯಲ್ಲಿ ತಲೆಮರೆಸಿಕೊಂಡಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ದೊರೆತ ಮೇರೆಗೆ ಭಾನುವಾರ ಬೆಳಿಗ್ಗೆ ಕಾರ್ಯಾಚರಣೆ ನಡೆಸಲಾಗಿದ್ದು ಈ ವೇಳೆ ನಕ್ಸಲರು ಪೊಲೀಸರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಓರ್ವ ನಕ್ಸಲ್ನನ್ನು ಎನ್ಕೌಂಟರ್ ಮಾಡಲಾಗಿದೆ ಹಾಗೂ ಮತ್ತೋರ್ವನಿಗೆ ಗಂಭೀರವಾದ ಗಾಯವಾಗಿದೆ ಎಂದು ವರದಿ ತಿಳಿಸಿದೆ.
ಕಾರ್ಯಾಚರಣೆ ಮುಂದುವರೆದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.