ಚೆನ್ನೈ, ಮೇ 17 (Daijiworld News/MB) : ಕೊರೊನಾ ಲಾಕ್ಡೌನ್ನ್ನು ಮೇ 31 ರವರೆಗೆ ಮಹಾರಾಷ್ಟ್ರ ಸರ್ಕಾರ ವಿಸ್ತರಣೆ ಮಾಡಿದ ಬೆನ್ನಲ್ಲೇ ತಮಿಳುನಾಡು ಸರ್ಕಾರವು ಕೂಡಾ ಮೇ 31ರ ವರೆಗೂ ಲಾಕ್ಡೌನ್ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ.
ಈ ಕುರಿತು ಮಾಹಿತಿ ನೀಡಿರುವ ತಮಿಳುನಾಡು ಸರ್ಕಾರ, ಚೆನ್ನೈ ಸೇರಿದಂತೆ ರಾಜ್ಯದ 12 ಜಿಲ್ಲೆಗಳಲ್ಲಿ ಈಗಿರುವ ನಿರ್ಬಂಧಗಳು ಈಗಿರುವಂತೆ ಮುಂದುವರೆಸಲಾಗುತ್ತದೆ ಎಂದು ತಿಳಿಸಿದೆ.
ಸಾರ್ವಜನಿಕ ಸಾರಿಗೆ ಮೇಲಿನ ನಿರ್ಬಂಧ ರಾಜ್ಯದಾದ್ಯಂತ ಮುಂದುವರಿಯಲಿದೆ. ಇನ್ನುಳಿದ 25 ಜಿಲ್ಲೆಗಳಲ್ಲಿ ಕೆಲವು ವಿನಾಯಿತಿಗಳನ್ನು ನೀಡಲಾಗಿದೆ ಎಂದು ಹೇಳಿದೆ.
ತಮಿಳುನಾಡಿನಲ್ಲಿ ಈವರೆಗೆ 10,585 ಕೊರೊನಾ ಪ್ರಕರಣಗಳು ದೃಢಪಟ್ಟಿದ್ದು 3538 ಮಂದಿ ಗುಣಮುಖವಾದರೆ 74 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.