ಬೆಂಗಳೂರು, ಮೇ 18 (Daijiworld News/MB) : ಉದ್ಯಮಿ ಅಜೀಂ ಪ್ರೇಮ್ ಜಿ ವಿರುದ್ಧವಾಗಿ ಭ್ರಷ್ಟಾಚಾರ ನಿಗ್ರಹ ಕಾಯ್ದೆ ಅಡಿ ದಾಖಲಿಸಿರುವ ಕ್ರಿಮಿನಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಟಿ ಸಿವಿಲ್ ಕೋರ್ಟ್ ನೀಡಿದ್ದ ಸಮನ್ಸ್ ರದ್ದುಗೊಳಿಸಲು ಕೋರಿ ಅಜೀಂ ಪ್ರೇಮ್ ಜೀ ದಂಪತಿ ಸಲ್ಲಿಸಿದ್ದ ಅರ್ಜಿಗಳನ್ನು ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ಹ ಅವರಿದ್ದ ಏಕಸದಸ್ಯ ನ್ಯಾಯಪೀಠ ವಜಾಗೊಳಿಸಿದೆ.
ಚೆನ್ನೈನ 'ಇಂಡಿಯಾ ಅವೇಕ್ ಫಾರ್ ಟ್ರಾನ್ಸ್ ಪರೆನ್ಸಿ' ಹೆಸರಿನ ಸರ್ಕಾರೇತರ ಸ್ವಯಂ ಸೇವಾ ಸಂಸ್ಥೆ ಬೆಂಗಳೂರಿನಲ್ಲಿರುವ ಲೋಕಾಯುಕ್ತ ವಿಶೇಷ ನ್ಯಾಯಾಲಯದಲ್ಲಿ ಜನವರಿ 27 ರಂದು ಅಜೀಂ ಪ್ರೇಮ್ ಜೀ ತಮ್ಮ ಒಡೆತನಕ್ಕೆ ಸೇರಿದ ನಾಲ್ಕು ಕಂಪನಿಗಳನ್ನು ಒಂದು ಕಂಪನಿ ವ್ಯಾಪ್ತಿಗೆ ತಂದಿರುವುದು ಕಾನೂನು ಬಾಹಿರವೆಂದು ಆರೋಪಿಸಿ ದೂರು ದಾಖಲು ಮಾಡಿದ್ದು ಇದನ್ನು ಪರಿಗಣಿಸಿದ ವಿಶೇಷ ನ್ಯಾಯಾಲಯ ಅಜೀಂ ಪ್ರೇಮ್ ಜೀ ಅವರಿಗೆ ಸಮನ್ಸ್ ಜಾರಿ ಮಾಡಿದ್ದು ಈ ಸಮನ್ಸ್ನ್ನು ರದ್ದು ಮಾಡುವಂತೆ ಕೋರಿ ಅಜೀಂ ಪ್ರೇಮ್ ಜಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಹೈಕೋರ್ಟ್ ಈ ಅರ್ಜಿಯನ್ನು ವಜಾ ಮಾಡಿದೆ.
ವಂಚನೆ ಮತ್ತು ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿಯಲ್ಲಿ ಅಜೀಂ ಪ್ರೇಮ್ ಜಿ ಸೇರಿದಂತೆ ಒಟ್ಟು ಏಳು ಜನರ ವಿರುದ್ಧ ಲೋಕಾಯುಕ್ತ ನ್ಯಾಯಾಲಯದಲ್ಲಿ ಮೂರು ಖಾಸಗಿ ದೂರುಗಳನ್ನು ದಾಖಲಿಸಲಾಗಿತ್ತು.