ಬೆಂಗಳೂರು, ಮೇ 19 (Daijiworld News/MB) : ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಪುತ್ರ ನಿಖಿಲ್ ಅವರ ವಿವಾಹಕ್ಕೆ ಅನುಮತಿ ನೀಡಿ ಅಧಿಕಾರಿಗಳು ಲಾಕ್ಡೌನ್ ನಿಯಮವನ್ನು ಉಲ್ಲಂಘನೆ ಮಾಡಿದ್ದಾರೆ ಎಂದು ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ಬೇಸರ ವ್ಯಕ್ತಪಡಿಸಿದೆ.
ನಿಖಿಲ್ ವಿಹಾಹಕ್ಕೆ ಸಂಬಂಧಿಸಿ ವಕೀಲೆ ಗೀತಾ ಮಿಶ್ರಾ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ನ್ಯಾಯಪೀಠ ವಿಲೇವಾರಿ ಮಾಡಿದೆ. ಈ ಸಂಬಂಧ ವಿಚಾರಣೆ ನಡೆಸುವ ಸಂದರ್ಭದಲ್ಲಿ ಪ್ರಮಾಣಪತ್ರ ಸಲ್ಲಿಸಿದ ಸರ್ಕಾರಿ ವಕೀಲರು ಕುಟುಂಬದ ನೂರು ಮಂದಿ ಸದಸ್ಯರ ಪಾಲ್ಗೊಳ್ಳುವಿಕೆಗೆ ಅನುಮತಿ ಪಡೆಯಲಾಗಿತ್ತು ಎಂದು ವಿವರಿಸಿದ್ದಾರೆ.
ಈ ಮೊದಲು ವಿವಾಹದ ಸಂದರ್ಭದಲ್ಲಿ ಎಷ್ಟು ವಾಹನಗಳಿಗೆ ಪಾಸ್ ನೀಡಲಾಗಿದೆ ಎಂಬ ಬಗ್ಗೆ ಉತ್ತರಿಸುವಂತೆ ಹೈಕೋರ್ಟ್ ಸರ್ಕಾರಕ್ಕೆ ಆದೇಶಿಸಿದ್ದು ಈ ವಿವಾಹಕ್ಕೆ ಸಂಬಂಧಿಸಿ ಸರ್ಕಾರ ನೀಡಿದ ಹೇಳಿಕೆಗೆ ಹೈಕೋರ್ಟ್ ಬೇಸರ ವ್ಯಕ್ತಪಡಿಸಿ ನಿಖಿಲ್ ವಿವಾಹದ ಸಂದರ್ಭದಲ್ಲಿ ಅಧಿಕಾರಿಗಳು ಮಾಡಿದ ತಪ್ಪನ್ನು ಸರ್ಕಾರ ಸಮರ್ಥನೆ ಮಾಡುತ್ತಿದೆ ಎಂದು ಹೇಳಿದೆ.