ಬೆಂಗಳೂರು, ಮೇ 19 (Daijiworld News/MB) : ಕೊರೊನಾ ಹರಡುವುದನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಪ್ರಸ್ತುತ ನಾಲ್ಕನೆ ಅವಧಿಯ ಲಾಕ್ಡೌನ್ ಮೇ 31 ರವೆಗೆ ಜಾರಿಯಲ್ಲಿರಲಿದ್ದು ಅಲ್ಲಿಯವರೆಗೆ ಕೇರಳ, ಗುಜರಾತ್, ಮಹಾರಾಷ್ಟ್ರ ಮತ್ತು ತಮಿಳುನಾಡಿನಿಂದ ಆಗಮಿಸುವ ಜನರಿಗೆ ಅವಕಾಶವಿರುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಜನರಿಗೆ ಸಹಾಯವಾಗಲ್ಲಿ ಎಂಬ ನಿಟ್ಟಿನಲ್ಲಿ ರಾಜ್ಯದೊಳಗೆ ರೈಲು ಸಂಚಾರಕ್ಕೆ ಅವಕಾಶ ನೀಡಲಾಗುತ್ತದೆ. ಆದರೆ ಹೊರ ರಾಜ್ಯಗಳಿಗೆ ರೈಲು ಸಂಚಾರಕ್ಕೆ ಅವಕಾಶವಿಲ್ಲ ಎಂದರು.
ಹೊರರಾಜ್ಯದ ಜನರಿಗೆ ತೀರಾ ಅನಿವಾರ್ಯವಾದ್ದಲ್ಲಿ ಮಾತ್ರ ರಾಜ್ಯಕ್ಕೆ ಬರಲು ಅವಕಾಶ ನೀಡಲಾಗುತ್ತದೆ. ಹಾಗೆ ಬರುವವರಿಗೆ ಹಂತ ಹಂತವಾಗಿ ಬಸ್ ವ್ಯವಸ್ಥೆ ಮಾಡಲಾಗುವುದು. ಬಂದವರನ್ನು ತಪಾಸಣೆಗೆ ಒಳಪಡಿಸಿ ಕಡ್ಡಾಯವಾಗಿ ಸಾಮೂಹಿಕ ಕ್ವಾರಂಟೈನ್ನಲ್ಲಿ ಇರಿಸಲಾಗುವುದು ಎಂದು ಹೇಳಿದ್ದಾರೆ.