ಬೆಂಗಳೂರು, ಮೇ 20 (DaijiworldNews/PY) : ಯುವಕರ ಹಾಗೂ ವಿದ್ಯಾರ್ಥಿಗಳು ಕೌಶಲಮಟ್ಟಕ್ಕೆ ಹೊಂದಿಕೊಳ್ಳುವ ಉದ್ಯೋಗ ಪಡೆದುಕೊಳ್ಳಲು ಅನುಕೂಲವಾಗುವಂತೆ ರಾಜ್ಯದಲ್ಲಿ ಆನ್ಲೈನ್ ಪೋರ್ಟಲ್ ಆರಂಭಿಸಲಾಗುವುದು. ಖಾಸಗಿ ಕಂಪೆನಿಗಳಲ್ಲಿ ಖಾಲಿ ಇರುವ ಉದ್ಯೋಗಗಳ ಮಾಹಿತಿ ಇದರಲ್ಲಿ ಸುಲಭವಾಗಿ ದೊರಕಲಿದೆ ಎಂದು ಉನ್ನತ ಶಿಕ್ಷಣ ಸಚಿವ ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು.
ಮಂಗಳವಾರ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ವತಿಯಿಂದ ಆಯೋಜಿಸಲಾಗಿದ್ದ ಫೇಸ್ಬುಕ್ ಲೈವ್ನಲ್ಲಿ ಮಾತನಾಡಿದ ಅವರು, ಜೂನ್ ಮೊದಲ ವಾರದಲ್ಲಿ ರಾಜ್ಯದ ಉನ್ನತ ಶಿಕ್ಷಣ ಕೋರ್ಸ್ಗಳ ಪರೀಕ್ಷೆ ಹಾಗೂ ತರಗತಿಗಳ ಪ್ರಾರಂಭದ ಬಗ್ಗೆ ತೀರ್ಮಾನ ಪ್ರಕಟಿಸಲಾಗುವುದು ಎಂದರು.
ಮುಂದಿನ ತರಗತಿಗಳಿಗೆ ಯಾವುದೇ ಪರೀಕ್ಷೆಇಲ್ಲದೇ ತೇರ್ಗಡೆ ಮಾಡುವಂತೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ಸಚಿವರು ಫೇಸ್ಬುಕ್ನಲ್ಲಿ ಮನವಿ ಮಾಡಿಕೊಂಡರು.
ವಿದ್ಯಾರ್ಥಿಗಳು ಈಗ ನಡೆಯುತ್ತಿರುವ ಆನ್ಲೈನ್ ತರಗತಿಗಳ ಮೂಲಕ ಬಾಕಿ ಇರುವಂತಹ ಪಠ್ಯಕ್ರಮ ಪೂರೈಸುವುದರತ್ತ ಗಮನವಿರಲಿ ಎಂದು ತಿಳಿಸಿದರು.