ಬೆಂಗಳೂರು, ಮೇ 20 (Daijiworld News/MB) : ರಾಜ್ಯದಲ್ಲಿ ಮಂಗಳವಾರ ಸಂಜೆ 5 ರಿಂದ ಬುಧವಾರ ಮಧ್ಯಾಹ್ನ 12 ಗಂಟೆಯವರೆಗೆ 63 ಹೊಸ ಕೊರೊನಾ ಪ್ರಕರಣಗಳು ದೃಢಪಟ್ಟಿದ್ದು ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 1,458 ಕ್ಕೆ ಏರಿಕೆಯಾಗಿದೆ.
ಬೆಂಗಳೂರು ನಗರದಲ್ಲಿ 4, ಮಂಡ್ಯ 8, ಕಲಬುರಗಿ 7, ಬೀದರ್ 10, ಉತ್ತರ ಕನ್ನಡ 1, ಹಾಸನ 21, ದಕ್ಷಿಣ ಕನ್ನಡ 1, ಉಡುಪಿ 6, ತುಮಕೂರು 4, ಯಾದಗಿರಿ 1 ಕೊರೊನಾ ಪ್ರಕರಣಗಳು ದೃಢಪಟ್ಟಿದೆ.
ಇಂದು 10 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು ಒಟ್ಟು 553 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಪ್ರಸ್ತುತ 864 ಜನರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.