ಬೆಂಗಳೂರು, ಮೇ 20 (DaijiworldNews/PY) : ಮೇ 19 ರಿಂದ ಸಂಜೆ 5ರಿಂದ ಮೇ 20 ಸಂಜೆ 5ರವರೆಗೆ ರಾಜ್ಯದಲ್ಲಿ 67 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 1,462ಕ್ಕೆ ಏರಿಕೆಯಾಗಿದೆ.
ಬೆಂಗಳೂರು ನಗರದಲ್ಲಿ 4, ಮಂಡ್ಯ 8, ಕಲಬುರಗಿ 7, ಬೀದರ್ 10, ಉತ್ತರ ಕನ್ನಡ 1, ಹಾಸನ 21, ದಕ್ಷಿಣ ಕನ್ನಡ 1, ಉಡುಪಿ 6, ತುಮಕೂರು 4, ಯಾದಗಿರಿ 1, ಮಂಡ್ಯ 8 ಕೊರೊನಾ ಪ್ರಕರಣಗಳು ದೃಢಪಟ್ಟಿದೆ.
ಇಂದು 13 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು ಒಟ್ಟು 556 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಪ್ರಸ್ತುತ 864 ಜನರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.