ನವದೆಹಲಿ, ಮೇ 21 (DaijiworldNews/PY) : ದೇಶದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಏರುತ್ತಲೇ ಇದ್ದು, ಕಳೆದ 24 ಗಂಟೆಗಳಲ್ಲಿ 5,609 ಹೊಸ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ದೇಶದಲ್ಲಿ ಸೋಕಿತರ ಸಂಖ್ಯೆ, 1,12,359ಕ್ಕೆ ಏರಿಕೆಯಾಗಿದೆ. ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ಪ್ರಕಟಿಸಿದೆ.
ಸುಮಾರು 3,435 ಸೋಂಕಿತರು ಸಾವನ್ನಪ್ಪಿದ್ದು, 45,299 ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಇನ್ನೂ 63,624 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮಹಾರಾಷ್ಟ್ರದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ 39,297ಕ್ಕೆ ಏರಿದ್ದು, ಇಲ್ಲಿಯವರೆಗೆ ಸುಮಾರು 1,390 ಮಂದಿ ಅಸುನೀಗಿದ್ದಾರೆ. ಇನ್ನು 10,318 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ತಮಿನಾಡಿನಲ್ಲಿ ಒಟ್ಟು 13,191 ಪ್ರಕರಣಗಳು ಪತ್ತೆಯಾಗಿದ್ದು, ಈ ಪೈಕಿ 5,882 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, 87 ಮಂದಿ ಮೃತಪಟ್ಟಿದ್ದಾರೆ.
ಇನ್ನು ಕರ್ನಾಟಕದಲ್ಲಿ ಬುಧವಾರ ಸಂಜೆ 5ವರೆಗೆ ಕೊರೊನಾ ಸೋಂಕಿತರ ಸಂಖ್ಯೆ 1,462ಕ್ಕೇರಿದ್ದು, ಈ ಪೈಕಿ ಸುಮಾರು 41 ಜನರು ಪ್ರಾಣ ಸಾವನ್ನಪ್ಪಿದ್ದು, 556 ಮಂದಿ ಗುಣಮುಖರಾಗಿದ್ದಾರೆ. ಇನ್ನೂ 864 ಸೋಂಕಿತರಿಗೆ ಚಿಕಿತ್ಸೆ ಮುಂದುವರಿದಿದೆ.
ಗುಜರಾತ್ನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 12,537ಕ್ಕೆ ಏರಿಕೆಯಾಗಿದ್ದು, ಇಲ್ಲಿಯವರೆಗೆ ಸೋಂಕಿಗೆ 749 ಮಂದಿ ಮೃತಪಟ್ಟಿದ್ದಾರೆ. ಈ ಪೈಕಿ 5,219 ಮಂದಿ ಗುಣಮುಖರಾಗಿದ್ದಾರೆ. ದೆಹಲಿಯಲ್ಲಿ ಇಲ್ಲಿಯವರೆಗೆ ಒಟ್ಟು ಸುಮಾರು 11,088 ಕೊರೊನಾ ಪ್ರಕರಣಗಳು ದಾಖಲಾಗಿದ್ದು, ಈ ಪೈಕಿ 176 ಮಂದಿ ಸಾವನ್ನಪ್ಪಿದ್ದು, 5,192 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.