ಬೆಂಗಳೂರು, ಮೇ 21 (Daijiworld News/MSP): ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಏರುಗತಿಯಲ್ಲಿ ಸಾಗುತ್ತಿರುವುದರಿಂದ ಕೊರೊನಾ ವೈರಸ್ ಸೋಂಕಿತರ ಉಸಿರಾಟಕ್ಕೆ ಆಮ್ಲಜನಕ ಚಿಕಿತ್ಸೆ ನೀಡಲು ಎಲ್ಲಾ ಜಿಲ್ಲಾ, ತಾಲೂಕು ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಆಮ್ಲಜನ ವ್ಯವಸ್ಥೆ ಕಲ್ಪಿಸಲು ಶೀಘ್ರ ಟೆಂಡರ್ ಕರೆದು ಕಾರ್ಯಾರಂಭ ಮಾಡುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆದೇಶ ಹೊರಡಿಸಿದೆ.
ಎಲ್ಲಾ ಜಿಲ್ಲೆಗಳ ಜಿಲ್ಲಾಸ್ಪತ್ರೆಯಲ್ಲಿ 125 ಹಾಸಿಗೆಗಳಿಗೆ, ತಾಲೂಕು ಆಸ್ಪತ್ರೆಗಳ 50 ಹಾಸಿಗೆಗಳಿಗೆ ಹಾಗೂ 206 ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ತಲಾ 30 ಹಾಸಿಗೆಗಳಲ್ಲಿ ಹೈಪ್ಲೋ ಆಕ್ಸಿಜನ್ ಸರಬರಾಜು ಪೈಪ್ ಲೈನ್ ವ್ಯವಸ್ಥೆ ಗೆ ತತ್ ಕ್ಷಣ ಟೆಂಡರ್ ಕರೆದು ಕಾರ್ಯಾರಂಭ ಮಾಡುವಂತೆ ಆದೇಶಾಲ್ಲಿ ತಿಳಿಸಲಾಗಿದೆ. ಇದಕ್ಕಾಗಿ 207.98 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.