ಶಿವಮೊಗ್ಗ, ಮೇ 21 (DaijiworldNews/PY) : ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ದ ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರು ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿ ಸಾಗರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಅಲ್ಲಿನ ವಕೀಲರೊಬ್ಬರು ದೂರು ದಾಖಲು ಮಾಡಿದ್ದಾರೆ.
ಪ್ರಧಾನಿ ಮೋದಿ ಅವರು ಪಿಎಂ ಕೇರ್ ಫಂಡ್ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಕಾಂಗ್ರೆಸ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿಎಂದು ಬರೆದಿದ್ದು, ಅಲ್ಲದೇ, ಕಾಂಗ್ರೆಸ್ ಟ್ವಿಟರ್ನಲ್ಲಿ ಪಿಎಂ ಕೇರ್ ಫಂಡ್ ಫ್ರಾಡ್ ಎಂದು ಟೀಕೆ ಮಾಡಿದೆ. ಇದರಿಂದಾಗಿ ಪ್ರಧಾನಿ ಮೋದಿ ಅವರನ್ನು ಅವಹೇಳನ ಮಾಡಲಾಗಿದೆ ಎಂದು ಆರೋಪಿಸಿ ಸಾಗರದ ವಕೀಲ ಪ್ರವೀಣ್ ಎಂಬುವರು ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರ ವಿರುದ್ದ ದೂರು ನೀಡಿದ್ದಾರೆ.
ಇದರಿಂದಾಗಿ ಪ್ರಧಾನಿ ಮೋದಿ ಅವರ ವಿರುದ್ದ ಅಪಪ್ರಚಾರವಾಗುತ್ತಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಸಾಗರ ಪಟ್ಟಣದ ಪೊಲೀಸರು ವಕೀಲ ಪ್ರವೀಣ್ ಅವರ ದೂರನ್ನು ಆಧರಿಸಿ ಸೋನಿಯಾ ಗಾಂಧಿ ಅವರ ವಿರುದ್ದ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.