ಬೆಂಗಳೂರು, ಮೇ 21 (DaijiworldNews/PY) : ಚೀನಾದಲ್ಲಿ ಹೂಡಿಕೆ ಮಾಡಿರುವ ವಿವಿಧ ದೇಶಗಳ ಹೂಡಿಕೆದಾರರು ಅಲ್ಲಿಂದ ಬಂಡವಾಳ ಹಿಂತೆಗೆದು ಭಾರತದಲ್ಲಿ ಹೂಡಿಕೆ ಮಾಡುವ ಇಚ್ಛೆ ವ್ಯಕ್ತಪಡಿಸಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಮುಖ್ಯಮಂತ್ರಿ ಗೃಹ ಸಚಿವ ಕೃಷ್ಣಾದಲ್ಲಿ ಕೈಗಾರಿಕಾ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಪ್ರಸ್ತುತ ಕೇವಲ 89 ಸಾವಿರ ಕಾರ್ಮಿಕರು ರಾಜ್ಯದಲ್ಲಿ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯಲ್ಲಿ ನೋಂದಾಯಿಸಿಕೊಂಡಿದ್ದು, ಅಭಿಯಾನದ ಮಾದರಿಯಲ್ಲಿ ಈ ವಲಯದಲ್ಲಿ ಕಾರ್ಮಿಕರು ಅಧಿಕ ಸಂಖ್ಯೆಯಲ್ಲಿ ನೋಂದಾವಣೆ ಮಾಡಿಕೊಳ್ಳಲು ಕ್ರಮ ತೆಗೆದುಕೊಳ್ಳುವಂತೆ ಕಾರ್ಮಿಕ ಇಲಾಖೆ ಅಧಿಕಾರಿಗಳಿಗೆ ಸಿಎಂ ಬಿಎಸ್ವೈ ಅವರು ತಿಳಿಸಿದರು.
ಇನ್ನು ರಾಜ್ಯಕ್ಕೆ ಆಗಮಿಸಿ ಹೂಡಿಕೆ ಮಾಡುವವರಿಗೆ ವಿಶೇಷ ಪ್ರೋತ್ಸಾಹಗಳ ಯೋಜನೆ ರೂಪಿಸಲು ಕ್ರಮಕೈಗೊಳ್ಳಲಾಗಿದೆ ಎಂದು ಸಿಎಂ ಅವರಿಗೆ ಅಧಿಕಾರಿಗಳು ಹೇಳಿದರು.
ಕೊರೊನಾ ಲಾಕ್ಡೌನ್ ಸಮಯದಲ್ಲಿ ಸ್ಥಗಿತಗೊಂಡಿದ್ದ ಕಾರ್ಖಾನೆಗಳಲ್ಲಿ ಈಗಾಗಲೇ ಶೇ.70 ರಷ್ಟು ಕೈಗಾರಿಕೆಗಳು ಪುನರಾರಂಭಗೊಂಡಿವೆ. ಇವುಗಳ ಕಾರ್ಯಕ್ಷಮತೆ ಹೆಚ್ಚು ಮಾಡಿ ಹಿಂದೆ ಇದ್ದಂತೆ ಮುಂಚೂಣಿಗೆ ತರುವ ನಿಟ್ಟಿನಲ್ಲಿ ಕೈಗಾರಿಕಾ ವಲಯದ ಪರಿಣತರೊಂದಿಗೆ, ಅಂತರಾಷ್ಟ್ರೀಯ ಕೈಗಾರೀಕೋದ್ಯಮಿಗಳ ಸಂಘಟನೆಯೊಂದಿಗೆ ಸಮಾಲೋಚನೆ ನಡೆಸುತ್ತಿರುವುದಾಗಿ ಅಧಿಕಾರಿಗಳು ಹೇಳಿದರು.
ಇನ್ನು ರಾಜ್ಯದಲ್ಲಿ ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ತಂದಿರುವ ಕಾರಣ ಉದ್ಯಮಿಗಳಿಗೆ ಜಮೀನು ಖರೀದಿ ಮಾಡುವ ಪ್ರಕ್ರಿಯೆ ಸರಳವಾಗಿದೆ. ಈ ಪ್ರಕ್ರಿಯೆಯಿಂದ ಹೂಡಿಕೆದಾರರನ್ನು ಆಕರ್ಷಿಸುವುದು ಸುಲಭವಾಗಿದೆ ಎನ್ನುವ ಅಭಿಪ್ರಾಉ ತಿಳಿಸಿದರು.
ಕೈಗಾರಿಕೆಯನ್ನು ಜಿಲ್ಲಾ ಮಟ್ಟದಲ್ಲಿಯೂ ಸ್ಥಾಪಿಸುವ ಪ್ರಕ್ರಿಯೆಯನ್ನು ಸರಳಗೊಳಿಸುವ ಉದ್ದೇಶದಿಂದ ಹಲವಾರು ಸುಧಾರಣಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.
ಪಿಪಿಈ ಕಿಟ್ಗಳು ಹೊರ ದೇಶದಿಂದ ಆಮದಾಗುತ್ತಿಇದ್ದು, ಅದನ್ನು ದೇಶದಲ್ಲಿಯೇ ತಯಾರು ಮಾಡಿ ಉತ್ತೇಜನ ಕಲ್ಪಿಸಲಾಗಿದ್ದು, ಈಗ ರಾಜ್ಯದಲ್ಲಿ 22 ಘಟಕಗಳು ಪಿಪಿಇ ಕಿಟ್ಗಳನ್ನು ಉತ್ಪಾದನೆ ಮಾಡುತ್ತಿದ್ದು, ನಾಲ್ಕು ಸಂಸ್ಥೆಗಳು ವೆಂಟಿಲೇಟರ್ಗಳನ್ನು ತಯಾರು ಮಾಡುತ್ತಿವೆ. 40 ಕ್ಕೂ ಹೆಚ್ಚು ಡಿಸ್ಟಿಲರಿಗಳಿಗೆ ಪರವಾನಗಿ ನೀಡಿ, ಉತ್ಪಾದನಾ ಸಾಮರ್ಥ್ಯ ಅಧಿಕ ಮಾಡಲಾಗಿದೆ.