ಬೆಂಗಳೂರು, ಮೇ 21 (DaijiworldNews/PY) : ಮದುವೆ ಸಮಾರಂಭಗಳಿಗೆ ವಿಶೇಷ ಪ್ರಕರಣವೆಂದು ಪರಿಗಣಿಸಿ ಪ್ರತೀ ಭಾನುವಾರ ಸಂಪೂರ್ಣ ಲಾಕ್ಡೌನ್ ಜಾರಿಯಲ್ಲಿದ್ದರೂ ಅನುಮತಿ ನೀಡಲಾಗುವುದು ಎಂದು ಸರ್ಕಾರ ತಿಳಿಸಿದೆ.
ರಾಷ್ಟ್ರೀಯ ನಿರ್ದೇಶನಗಳನ್ನು ಅನುಸರಿಸಿ ಸರಳ ವಿವಾಹವನ್ನು ನಡೆಸಬಹುದು. ಆದರೆ, ಮದುವೆಯಲ್ಲಿ ಗರಿಷ್ಠ ಅತಿಥಿಗಳ ಸಂಖ್ಯೆ 50 ಇರಬೇಕು ಹಾಗೂ ವ್ಯಕ್ತಿಗಳ ಮಧ್ಯೆ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಇನ್ನು ಭಾನುವಾರಗಳಂದು ಅಗತ್ಯವಾದ ಚಟುವಟಿಕೆಗಳಿಗೂ ಅವಕಾಶ ನೀಡಬಹುದು ಎಂದು ಹೇಳಿದೆ.
ಉಳಿದಂತೆ ಎಲ್ಲಾ ರೀತಿಯ ಚಟುವಟಿಕೆಗಳು, ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಭಾನುವಾರ ಬೆಳಿಗ್ಗೆ 7 ರಿಂದ ಸಂಜೆ 7 ರವರೆಗೆ ಸಂಪೂರ್ಣ ಲಾಕ್ಡೌನ್ ಇರುತ್ತದೆ. ಅಲ್ಲದೇ, 14ರ ನೇ ಸೆಕ್ಷನ್ ಅಡಿ ನಿಷೇಧಾಜ್ಞೆ ಇರುತ್ತದೆ ಎಂದೂ ತಿಳಿಸಿದೆ.