ನವದೆಹಲಿ, ಮೇ 22(Daijiworld News/MSP): ಕೊರೊನಾ ನಿಯಂತ್ರಣಕ್ಕಾಗಿ ದೇಶದಾದ್ಯಂತ ಹೇರಿರುವ ಲಾಕ್ ಡೌನ್ ಹಿನ್ನೆಲೆಯಲ್ಲಿ ಉಂಟಾಗಿರುವ ಹಣಕಾಸು ಬಿಕ್ಕಟ್ಟಿನ ಸಂದರ್ಭದಲ್ಲಿ ಆರ್ ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಪತ್ರಿಕಾಗೋಷ್ಠಿ ನಡೆಸಿದ್ದು,ಹಲವು ಕ್ರಮಗಳನ್ನು ಪ್ರಕಟಿಸಿದ್ದಾರೆ.
ರೆಪೊ ದರ 40 ಬೇಸಿಸ್ ಪಾಯಿಂಟ್ ಗಳಷ್ಟು ಕಡಿತಗೊಳಿಸಿದ್ದು, ಇದರಿಂದಾಗಿ ಗೃಹ, ವಾಹನ ಹಾಗೂ ವೈಯಕ್ತಿಕ ಸಾಲದ ಮೇಲಿನ ಬಡ್ಡಿದರ ಇಳಿಕೆ ಮಾಡಿದಂತಾಗಿದೆ.
ಇದರೊಂದಿಗೆ ಮೂರು ತಿಂಗಳ ಕಾಲ ಅಂದರೆ ಆಗಸ್ಟ್ 31ರವರೆಗೆ ಇಎಂಐ ಪಾವತಿಯನ್ನು ಮುಂದೂಡಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಮಾರ್ಚ್ 24ರಿಂದ ದೇಶಾದ್ಯಂತ ಲಾಕ್ ಡೌನ್ ಘೋಷಿಸಿದ್ದ ನಂತರ ಆರ್ ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಅವರು ಮಾರ್ಚ್ 27 ಹಾಗೂ ಏಪ್ರಿಲ್ 17ರಂದು ಸುದ್ದಿಗೋಷ್ಠಿ ನಡೆಸಿ ಮಹತ್ವದ ಘೋಷಣೆ ಹೊರಡಿಸಿದ್ದರು. ಇದೀಗ ಮೂರನೇ ಬಾರಿ ಪತ್ರಿಕಾಗೋಷ್ಠಿ ನಡೆಸಿ ಮತ್ತಷ್ಟು ಮಹತ್ವದ ಘೋಷಣೆ ಪ್ರಕಟಿಸಿದ್ದಾರೆ.
ರೆಪೊ ದರ ಎಂದರೇನು? ಬ್ಯಾಂಕುಗಳಲ್ಲಿ ಹಣದ ಕೊರತೆಯಾದರೆ ಅಥವಾ ಹಣದ ಅವಶ್ಯಕತೆಯಿದ್ದರೆ ಆರ್ ಬಿಐ ಬ್ಯಾಂಕುಗಳಿಗೆ ಕೊಡುವ ಸಾಲದ ಹಣದ ಮೇಲೆ ವಿಧಿಸುವ ನಿಶ್ಚಿತ ಬಡ್ಡಿ ದರವಾಗಿದೆ.