ರಾಯಚೂರು, ಮೇ 22 (DaijiworldNews/SM): ಇನ್ನೆರಡು ದಿನಗಳಲ್ಲಿ ರಾಜ್ಯದಲ್ಲಿ ಖಾಸಗಿ ಬಸ್ ಗಳು ಸಂಚಾರ ನಡೆಸಲಿವೆ ಎಂದು ಡಿಸಿಎಂ ಹಾಗೂ ರಾಜ್ಯ ಸಾರಿಗೆ ಸಚಿವ ಲಕ್ಷಣ ಸವದಿ ತಿಳಿಸಿದ್ದಾರೆ.
ಕೋವಿಡ್-19 ಸಂಬಂಧಿಸಿದಂತೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, ಶಿಘ್ರದಲ್ಲೇ ರಾಜ್ಯದಲ್ಲಿ ಖಾಸಗಿ ಬಸ್ ಸಂಚಾರ ಆರಂಭಗೊಳ್ಳಲಿದೆ. ಯಾವ ಪ್ರದೇಶಕ್ಕೆ ಖಾಸಗಿ ಬಸ್ ಸಂಚಾರ ನಡೆಸುವುದಿಲ್ಲ. ಆ ಪ್ರದೇಶಗಳಿಗೆ ಸರಕಾರಿ ಬಸ್ ಗಳು ಸಂಚಾರ ನಡೆಸಲಿವೆ ಎಂದು ತಿಳಿಸಿದ್ದಾರೆ.
ಖಾಸಗಿ ಬಸ್ ನಿರ್ವಾಹಕರಿಗೆ ಪ್ರಯಾಣಿಕರಿಂದ ಶೇ 15ರಷ್ಟು ಹೆಚ್ಚಿನ ಟಿಕೆಟ್ ದರ ಸಂಗ್ರಹಿಸುವ ಮೂಲಕ ಬಸ್ಸುಗಳನ್ನು ಓಡಿಸಲು ಅನುಮತಿ ನೀಡಲಾಗಿದೆ. ಇನ್ನು ಬಸ್ ಮಾಲಕರು ಶೇಕಡಾ 50ರಷ್ಟು ಹೆಚ್ಚಳಕ್ಕೆ ಮನವಿ ಮಾಡಿಕೊಂಡಿದ್ದಾರೆ. ಆದರೆ, ನಾವು ಶೇಕಡಾ 15ರಷ್ಟು ಹೆಚ್ಚಳಕ್ಕೆ ಅನುಮತಿ ನೀಡಿದ್ದೇವೆ. ಅಲ್ಲದೆ, ಖಾಸಗಿ ಬಸ್ನ ರಸ್ತೆ ತೆರಿಗೆಯನ್ನು ಕೂಡ ಮನ್ನಾ ಮಾಡಲಾಗಿದೆ. ಖಾಸಗಿ ಬಸ್ ನಿರ್ವಾಹಕರು ತಮ್ಮ ಬಸ್ಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರ ಬಗ್ಗೆ ಮಾಹಿತಿ ನೀಡುವಂತೆ ಕೋರಲಾಗಿದೆ. ಅವರು ಸರ್ಕಾರ ನಡೆಸುವ ಕೆಎಸ್ಆರ್ಟಿಸಿ ಬಸ್ಗಳಿಗೆ ಅನ್ವಯವಾಗುವ ಎಲ್ಲ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಡಿಸಿಎಂ ಸವದಿ ತಿಳಿಸಿದ್ದಾರೆ.
ಮಹಾರಾಷ್ಟ್ರ ಮತ್ತು ಗುಜರಾತ್ನಿಂದಾಗಿ ನಾವು ಹೆಚ್ಚಿನ ಸಮಸ್ಯೆಗಳನ್ನು ಎದುರಿಸುತ್ತಿದ್ದೇವೆ. ಮಹಾರಾಷ್ಟ್ರದ ಮೂರು ಜಿಲ್ಲೆಗಳಲ್ಲಿ ಕರೊನಾ ವೈರಸ್ ಇಲ್ಲ. ಆದರೆ ಧಾರವಾಡ, ಬೆಳಗಾವಿ ಮತ್ತು ವಿಜಯಪುರ ಜಿಲ್ಲೆಗಳಿಂದ ನಮ್ಮ ಅನೇಕ ಜನರು ಮಹಾರಾಷ್ಟ್ರದ ಜಿಲ್ಲೆಗಳಿಗೆ ಹೋಗಿದ್ದಾರೆ. ಅಲ್ಲಿ ಸೋಂಕು ಹೆಚ್ಚಾಗಿದೆ. ನಾವು ಮಹಾರಾಷ್ಟ್ರದಿಂದ 16,000-18,000 ಜನರನ್ನು ನಮ್ಮ ರಾಜ್ಯಕ್ಕೆ ಕರೆತಂದಿದ್ದೇವೆ. ಮಹಾರಾಷ್ಟ್ರ ಮತ್ತು ಗುಜರಾತ್ನಿಂದ ಮರಳಿದ ನಮ್ಮ ರಾಜ್ಯದ ಜನರಿಂದ ಸೋಂಕು ರಾಜ್ಯದಲ್ಲಿ ಹೆಚ್ಚುತ್ತಿದೆ ಎಂದು ಅವರು ಹೇಳಿದರು.