ಬೆಂಗಳೂರು, ಮೇ 23 (Daijiworld News/MSP): ಶಾಲೆಗಳ ಆರಂಭಕ್ಕೆ ಮುಂದಿನ ವಾರದಲ್ಲಿ ದಿನಾಂಕ ನಿಗದಿಗೊಳಿಸಲಾಗುವುದು ಎಂದು ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ. ತರಗತಿಗಳನ್ನು ತಕ್ಷಣ ಪ್ರಾರಂಭಿಸಬಾರದೆಂದು ಪೋಷಕರ ಒತ್ತಡ ಹಾಗೂ ಅಭಿಪ್ರಾಯವಿದ್ದು ಈ ಬಗ್ಗೆ ಎಲ್ಲಾ ಆಯಾಮಗಳಲ್ಲಿ ಚರ್ಚಿಸಿ ಒಂದು ನಿರ್ಧಾರಕ್ಕೆ ಬಂದು ಪ್ರಾಥಮಿಕ ಹಾಗೂ ಪೂರ್ವ ಪ್ರಾಥಮಿಕ ತರಗತಿಗಳ ಪ್ರಾರಂಭದ ದಿನಾಂಕವನ್ನು ಮುಂದಿನ ವಾರದಲ್ಲಿ ಅಂತಿಮಗೊಳಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.
ಕೇಂದ್ರ ಸರ್ಕಾರ ಸಂಸ್ಥೆ ಆಕಾಶವಾಣಿ ಜೊತೆ ಮಾತನಾಡಿದ ಅವರು " ಎಸ್ಸೆಸ್ಸೆಲ್ಸಿ ಪರೀಕ್ಷೆ ವಿಚಾರವಾಗಿ ಮಾತನಾಡಿದ ಅವರು ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸುವುದು ಅನಿವಾರ್ಯವೇ ಹೊರತು ಅದು ಯಾರೊಬ್ಬರ ಪ್ರತಿಷ್ಠೆಗಾಗಿ ಅಲ್ಲ. ಕರ್ನಾಟಕದಲ್ಲಿ ವಿದ್ಯಾರ್ಥಿಗಳ ಮುಂದಿನ ವ್ಯಾಸಂಗಕ್ಕೆ ಎಸ್ಸೆಸ್ಸೆಲ್ಸಿಯೂ ಒಂದು ಪ್ರಮುಖ ತಿರುವು ಮತ್ತು ಮಾನದಂಡವಾಗಿರುವುದರಿಂದ 10ನೇ ತರಗತಿ ಪರೀಕ್ಷೆಯನ್ನು ನಡೆಸಬೇಕಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಯಾರಿಗೂ ಸಮಸ್ಯೆ ಆಗದಂತೆ, ಕೋವಿಡ್ ಹಿನ್ನೆಲೆಯಲ್ಲಿ ಎಲ್ಲಾ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಅನುಸರಿಸಲಾಗುವುದು, ಮಕ್ಕಳ ಹಿತ ನಮಗೆ ಮುಖ್ಯವಾಗಿದ್ದು, ತಿಯೊಬ್ಬ ವಿದ್ಯಾರ್ಥಿಗೆ ಆರೋಗ್ಯ ತಪಾಸಣೆ, ಮಾಸ್ಕ್ ಪೂರೈಕೆ, ಪರೀಕ್ಷಾ ಕೇಂದ್ರದ ಸ್ವಚ್ಛತೆ, ಸಾಮಾಜಿಕ ಅಂತರ ಕಾಪಾಡುವುದು ಸೇರಿದಂತೆ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಇದೇ ವೇಳೆ ಸ್ಪಷ್ಟಪಡಿಸಿದರು.