ನವದೆಹಲಿ, ಮೇ 23 (DaijiworldNews/PY) : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 6,654 ಹೊಸ ಹೊಸ ಕೊರೊನಾ ಪ್ರಕರಣಗಳು ದಾಖಲಾಗಿದ್ದು, 137 ಮಂದಿ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಇಲ್ಲಿಯವರೆಗೆ ಒಟ್ಟು ಸುಮಾರು 1,25,101 ಮಂದಿಗಿ ಕೊರೊನಾ ಸೋಂಕು ದೃಢಪಟ್ಟಿದ್ದು, ಈ ಪೈಕಿ 48,533 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈ ನಡುವೆ ಮೃತರ ಸಂಖ್ಯೆ 3,720ಕ್ಕೆ ಏರಿಕೆಯಾಗಿದ್ದು, ಇನ್ನೂ 69,597 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.
ಕರ್ನಾಟಕದಲ್ಲಿ ಶುಕ್ರವಾರ ಸಂಜೆ 5 ಗಂಟೆಯವರೆಗೆ ಕೊರೊನಾ ಸೋಂಕಿತರ ಸಂಖ್ಯೆ 1,743ಕ್ಕೆ ಏರಿಕೆಯಾಗಿದೆ. ಈ ಪೈಕಿ 41 ಜನರು ಸಾವಿಗೀಡಾಗಿದ್ದಾರೆ. 597 ಮಂದಿ ಗುಣಮುಖರಾಗಿದ್ದಾರೆ. 1,104 ಸೋಂಕಿತರಿಗೆ ಚಿಕಿತ್ಸೆ ಮುಂದುವರಿದಿದೆ.
ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 44,582ಕ್ಕೆ ಏರಿಕೆಯಾಗಿದ್ದು, ಇಲ್ಲಿಯವರೆಗೆ 1,517 ಜನರು ಮೃತಪಟ್ಟಿದ್ದಾರೆ. ಈ ಪೈಕಿ ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ತಮಿಳುನಾಡಿನಲ್ಲಿ 14,753 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, 7,128 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 98 ಮಂದಿ ಮೃತಪಟ್ಟಿದ್ದಾರೆ.
ಗುಜರಾತ್ನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 13,268ಕ್ಕೆ ಏರಿಕೆಯಾಗಿದ್ದು, ಇಲ್ಲಿಯವರೆಗೆ 802 ಮಂದಿ ಮೃತಪಟ್ಟಿದ್ದಾರೆ. ಈ ಪೈಕಿ 5,880 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ದೆಹಲಿಯಲ್ಲಿ ಇಲ್ಲಿಯವರೆಗೆ ಒಟ್ಟು 12,319 ಕೊರೊನಾ ಪ್ರಕರಣಗಳು ದಾಖಲಾಗಿದ್ದು, , 208 ಮಂದಿ ಮೃತಪಟ್ಟಿದ್ದಾರೆ. 5,897 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.