ನವದೆಹಲಿ, ಮೇ 23 (Daijiworld News/MB) : ದೆಹಲಿಯಲ್ಲಿ ಲಾಕ್ಡೌನ್ ಜಾರಿಯಲ್ಲಿದ್ದರೂ ದೇವಸ್ಥಾನದ ಬಾಗಿಲು ತೆರೆದು ಭಕ್ತಾದಿಗಳನ್ನು ಗುಂಪು ಸೇರಿಸಿದ ಕಾರಣಕ್ಕಾಗಿ ಸ್ವಯಂಘೋಷಿತ ದೇವಮಾನವ ದಾತಿ ಮಹಾರಾಜ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿರುವ ದಕ್ಷಿಣ ದೆಹಲಿ ವಿಭಾಗದ ಡಿಸಿಪಿ ಅತುಲ್ ಟಾಕೂರ್, "ಲಾಕ್ಡೌನ್ ಜಾರಿಯಲ್ಲಿದ್ದರೂ ದೇವಸ್ಥಾನದ ಬಾಗಿಲು ತೆರದು ಜನರನ್ನು ಗುಂಪು ಸೇರಿಸಿ ಲಾಕ್ಡೌನ್ ಉಲ್ಲಂಘನೆ ಮಾಡಿದ್ದಾರೆ. ಈ ಕಾರಣದಿಂದಾಗಿ ವಿಪತ್ತು ನಿರ್ವಹಣಾ ಕಾಯ್ದೆ ಮತ್ತು ಸಾಂಕ್ರಾಮಿಕ ರೋಗ ತಡೆ ಕಾಯ್ದೆ ಉಲ್ಲಂಘನೆ, ಭಾರತೀಯ ದಂಡ ಸಂಹಿತೆ ಪ್ರಕಾರ ಪ್ರಕರಣ ದಾಖಲು ಮಾಡಲಾಗಿದೆ" ಎಂದು ತಿಳಿಸಿದ್ದಾರೆ.
ಶುಕ್ರವಾರ ದಕ್ಷಿಣ ದೆಹಲಿಯಲ್ಲಿರುವ ಮೆಹೋಲಿಯಲ್ಲಿ ದೇವಸ್ಥಾನದ ಬಾಗಿಲು ತೆರದು ಭಕ್ತಾದಿಗಳನ್ನು ಗುಂಪು ಸೇರಿಸಿದ್ದು ಈ ಬಗ್ಗೆ ಜಿಲ್ಲಾ ಮ್ಯಾಜಿಸ್ಟ್ರೇಟ್ ಪೊಲೀಸರಲ್ಲಿ ತನಿಖೆ ನಡೆಸುವಂತೆ ತಿಳಿಸಿದ್ದರು.