ನವದೆಹಲಿ, ಮೇ 23 (DaijiworldNews/PY) : ಕೊರೊನಾ ವೈರಸ್ ಉಂಟು ಮಾಡಿರುವ ಆರೋಗ್ಯ ಹಾಗೂ ಆರ್ಥಿಕ ಪರಿಣಾಮಗಳ ವಿಚಾರವಾಗಿ ಶ್ರೀಲಂಕಾ ಅಧ್ಯಕ್ಷ ಗೊಟಬಯ ರಾಜಪಕ್ಸೆ ಅವರೊಂದಿಗೆ ಶನಿವಾರ ದೂರವಾಣಿ ಮೂಲಕ ಚರ್ಚೆ ನಡೆಸಿದ್ದಾರೆ.
ಈ ಬಗ್ಗೆ ಪ್ರಧಾನಿ ಮೋದಿ ಅವರು ಟ್ವೀಟ್ ಮಾಡಿದ್ದು, ಶ್ರೀಲಂಕಾ ಅಧ್ಯಕ್ಷ ಗೊಟಬಯ ಅವರೊಂದಿಗೆ ಮಾತುಕತೆ ನಡೆಸಲಾಯಿತು. ಶ್ರೀಲಂಕ ಅವರ ನಾಯಕತ್ವದಲ್ಲಿ ಕೊರೊನಾ ವಿರುದ್ದ ಹೋರಾಡುತ್ತಿದೆ. ಭಾರತವು, ಕೊರೊನಾ ಉಂಟುಮಾಡಿರುವ ಆರೋಗ್ಯ ಹಾಗೂ ಆರ್ಥಿಕ ಪರಿಣಮಗಳನ್ನು ಎದುರಿಸಲು ತನ್ನ ನೆರೆಯ ರಾಷ್ಟ್ರಕ್ಕೆ ಬೆಂಬಲ ನೀಡುವುದನ್ನು ಮುಂದುವರೆಸುತ್ತದೆ ಎಂದು ಹೇಳಿದ್ದಾರೆ.
ನಾವು ಶ್ರೀಲಾಂಕಾದಲ್ಲಿ ಭಾರತದ ನೆರವಿನ ಅಭಿವೃದ್ದಿ ಯೋಜನೆಗಳಿಗೆ ಇನ್ನಷ್ಟು ವೇಗವನ್ನು ಕೊಡಲು ಹಾಗೂ ಹೂಡಿಕೆಯ ಸಂಪರ್ಕವನ್ನು ಬಲಪಡಿಸಲು ಒಪ್ಪಿಗೆ ನೀಡಿದ್ದೇವೆ ಎಂದಿ ಟ್ವೀಟ್ ಮೂಲಕ ಪ್ರಧಾನಿ ಮೋದಿ ಅವರು ತಿಳಿಸಿದ್ದಾರೆ.