ಬೆಂಗಳೂರು, ಮೇ 24 (DaijiworldNews/PY) : ರಾಜ್ಯದ ಕರಾವಳಿ ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಕಡೆಗಳಲ್ಲಿ ಮೇ 25 ಈದ್ ಉಲ್ ಫಿತ್ರ್ ಹಬ್ಬವನ್ನು ಆಚರಿಸಲಾಗುವುದು ಸಮಿತಿಯ ಮುಖ್ಯಸ್ಥ ಮಕ್ಸೂದ್ ಇಮ್ರಾನ್ ಹೇಳಿದ್ದಾರೆ.
ಶನಿವಾರ ಬೆಂಗಳೂರಿನಲ್ಲಿ ನಡೆದ ಕರ್ನಾಟಕ ಚಂದ್ರದರ್ಶನ ಸಮಿತಿ ಸಭೆಯ ಬಳಿಕ ಸುದ್ದಿಗಾರರೊಂದಿಗ ಮಾತನಾಡಿದ ಅವರು, ರಾಜ್ಯದ ಯಾವುದೇ ಭಾಗದಲ್ಲಿ ಶವ್ವಾಲ್ ತಿಂಗಳ ಚಂದ್ರದರ್ಶನವಾಗಿಲ್ಲ ಎಂದು ತಿಳಿಸಿದ್ದಾರೆ.
ಭಾನುವಾರ ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕು ಹಾಗೂ ಹಾಸನ, ಉಡುಪಿ ಜಿಲ್ಲೆಗಳಲ್ಲಿ, ಚಿಕ್ಕಮಗಳೂರಿನ ಕೆಲವು ಊರುಗಳಲ್ಲಿ ಮಾತ್ರವೇ ಈದ್ ಉಲ್ ಫಿತ್ರ್ ಹಬ್ಬವನ್ನು ಆಚರಿಸಲಾಗುವುದು. ರಂಜಾನ್ ತಿಂಗಳ ಉಪವಾಸದ 30 ದಿನಗಳು ಅಲ್ಲಿ ಶನಿವಾರವೇ ಪೂರ್ಣಗೊಂಡಿವೆ ಎಂದು ತಿಳಿಸಿದ್ದಾರೆ.