ನವದೆಹಲಿ, ಮೇ 24 (DaijiworldNews/PY) : ಈಶಾನ್ಯ ದೆಹಲಿಯ ಜಫ್ರಾಬಾದ್ನಲ್ಲಿ ನಡೆದ ಪ್ರತಿಭಟನೆಗೆ ಸಂಬಂಧಪಟ್ಟಂತೆ ಜವಹರಲಾಲ್ ವಿಶ್ವವಿದ್ಯಾಲಯದ ಇಬ್ಬರು ವಿದ್ಯಾರ್ಥಿಗಳನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ವಿದ್ಯಾರ್ಥಿನಿಯರನ್ನು ದೇವಂಗಾನ ಕಳಿತಾ ಹಾಗೂ ನತಾಶ ನರ್ವಾಲ ಎಂದು ಗುರುತಿಸಲಾಗಿದೆ. ಇವರಿಬ್ಬರೂ ದೆಹಲಿಯ ಪಿಂಜ್ರ ಟೊಡ್ ಗುಂಪಿಗೆ ಸೇರಿದವರಾಗಿದ್ದು, ಕಾಲೇಜು ವಿದ್ಯಾರ್ಥಿಯನಿಯರ ಹಕ್ಕುಗಳಿಗಾಗಿ ಹೋರಾಟ ನಡೆಸುತ್ತಿದ್ದರು.
ಕಳೆದ ಫೆಬ್ರವರಿಯಲ್ಲಿ ಈ ವಿದ್ಯಾರ್ಥಿಗಳ ಗುಂಪು ಜಫ್ರಾಬಾದ್ ಮೆಟ್ರೊ ಸ್ಟೇಷನ್ ಹತ್ತಿರ ಭಾರೀ ಸಂಖ್ಯೆಯಲ್ಲಿ ಜಮಾಯಿಸಿ ಪ್ರತಿಭಟನೆ ಮಾಡುತ್ತಿದ್ದರು. ಇತ್ತೀಚೆಗೆ ದೆಹಲಿ ಪೊಲೀಸರು ಸಿಎಎ ಪ್ರತಿಭಟನೆಗೆ ಸಂಬಂಧಪಟ್ಟಂತೆ ಹಲವು ವಿದ್ಯಾರ್ಥಿಗಳನ್ನು ಹಾಗೂ ಕಾರ್ಯಕರ್ತರನ್ನು ಬಂಧಿಸಿದ್ದಾರೆ
ಬಂಧಿತರ ವಿರುದ್ದ ಭಾರತೀಯ ದಂಡ ಸಂಹಿತೆ ಸೆಕ್ಷನ್ 186 ಹಾಗೂ 353ರಡಿ ಕೇಸು ದಾಖಲಿಸಲಾಗಿದೆ.