ಬೆಂಗಳೂರು, ಮೇ 24 (Daijiworld News/MB) : ಕೊರೊನಾ ಸೋಂಕು ನಿಯಂತ್ರಿಸುವಲ್ಲಿ ಜಾರಿಯಲ್ಲಿರುವ ನಾಲ್ಕನೇ ಹಂತದ ಲಾಕ್ಡೌನ್ನಲ್ಲಿ ಕೆಲವೊಂದು ಸಡಿಲಿಕೆ ಮಾಡಲಾಗಿದ್ದು ಭಾನುವಾರ ಮಾತ್ರ ಸಂಪೂರ್ಣ ಲಾಕ್ಡೌನ್ ಜಾರಿಯಲ್ಲಿರಲಿದ್ದು, ರಾಜ್ಯದಲ್ಲಿ ಭಾನುವಾರದ 4.0 ಲಾಕ್ಡೌನ್ ಯಶಸ್ವಿಯಾಗಿದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಣ್ಣ ಪುಟ್ಟ ಸಮಸ್ಯೆಗಳು ಎದುರಾದರೂ ಕೂಡಾ ಕರ್ತವ್ಯದಲ್ಲಿದ್ದ ಪೊಲೀಸರು ಯಶಸ್ವಿಯಾಗಿ ನಿಭಾಯಿಸಿದ್ದಾರೆ. ಆದರೆ ಹೊರಗಿನಿಂದ ಬಂದವರೇ ಹೆಚ್ಚಿನ ಕಿರಿಕಿರಿ ಉಂಟು ಮಾಡುತ್ತಿದ್ದಾರೆ. ಅವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಇನ್ನು ಡಿಕೆ ಶಿವಕುಮಾರ್ ಕುರಿತಾದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಡಿಕೆಶಿ ಅವರಿಗೆ ಚೆಕ್ ನೀಡುವ ಯಾವುದೇ ಹಕ್ಕಿಲ್ಲ. ಆ ಕಾರಣದಿಂದಾಗಿ ಪದೇ ಪದೆ ಚೆಕ್ ನೀಡುತ್ತೇನೆ ಎನ್ನುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.