ಬೆಂಗಳೂರು, ಮೇ 24 (Daijiworld News/MB) : ಕಳೆದ 24 ಗಂಟೆಗಳಲ್ಲಿ ಕರ್ನಾಟಕದಲ್ಲಿ 130 ಮಂದಿಗೆ ಕೊರೊನಾ ದೃಢಪಟ್ಟಿದ್ದು ರಾಜ್ಯದಲ್ಲಿ ಕೊರೊನಾ ಸೋಂಕಿತ ಸಂಖ್ಯೆ 2089ಕ್ಕೆ ಏರಿಕೆಯಾಗಿದೆ.
ಶನಿವಾರ ಸಂಜೆ 5 ಗಂಟೆಯಿಂದ ರವಿವಾರ ಸಂಜೆ 5 ಗಂಟೆಯವರೆಗೆ ಚಿಕ್ಕಬಳ್ಳಾಪುರದಲ್ಲಿ 27, ಯಾದಗಿರಿ 24, ಉಡುಪಿ 23, ಮಂಡ್ಯ 15, ಹಾಸನ 14, ಬೀದರ್ 6, ಕಲಬುರಗಿ 6, , ದಾವಣಗೆರೆ 4, ಉತ್ತರ ಕನ್ನಡ, ಶಿವಮೊಗ್ಗ, ತುಮಕೂರಿನಲ್ಲಿ ತಲಾ 2, ದಕ್ಷಿಣ ಕನ್ನಡ, ಕೊಡಗು, ಧಾರವಾಡ, ವಿಜಯಪುರ ಹಾಗೂ ಬೆಂಗಳೂರು ನಗರದಲ್ಲಿ ತಲಾ ಒಂದು ಪ್ರಕರಣಗಳು ದಾಖಲಾಗಿದೆ.
ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 46 ಮಂದಿ ಗುಣಮುಣರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು ಒಟ್ಟು 654 ಮಂದಿ ಗುಣಮುಖರಾಗಿದ್ದಾರೆ.
ಕೊರೊನಾದಿಂದಾಗಿ 42 ಮಂದಿ ಸಾವನ್ನಪ್ಪಿದ್ದು 1391 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.