ನವದೆಹಲಿ, ಮೇ 25(Daijiworld News/MSP): ಭದ್ರತಾ ಪಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ ಇಬ್ಬರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ ಎಂದು ಕಾಶ್ಮೀರದ ಪೊಲೀಸ್ ಇನ್ಸ್ಪೆಕ್ಟರ್ ಜನರಲ್ (ಐಜಿಪಿ) ವಿಜಯ್ ಕುಮಾರ್ ಸೋಮವಾರ ಮಾಹಿತಿ ನೀಡಿದ್ದಾರೆ.
ಜಮ್ಮು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಮಂಜ್ಗಮ್ ಪ್ರದೇಶದಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಎನ್ಕೌಂಟರ್ ಭುಗಿಲೆದ್ದಿತ್ತು. ಕೇಂದ್ರ ಮೀಸಲು ಪೊಲೀಸ್ ಪಡೆ ಮತ್ತು ಕುಲ್ಗಮ್ ಪೊಲೀಸರು ಹಾಗೂ ಭದ್ರತಾ ಪಡೆಗಳ ಸತತ ಕಾರ್ಯಾಚರಣೆಯ ಫಲವಾಗಿ ಇಬ್ಬರು ಭಯೋತ್ಪಾದಕ ಹತ್ಯೆ ಮಾಡಲಾಗಿದೆ.
ಈ ಹಿಂದೆ ಮೇ 19 ರಂದು ಶ್ರೀನಗರದ ನವಕಾಡಲ್ ಪ್ರದೇಶದಲ್ಲಿ ಭದ್ರತಾ ಪಡೆಗಳ ಎನ್ ಕೌಂಟರ್ ನಲ್ಲಿ ಇಬ್ಬರು ಭಯೋತ್ಪಾದಕರು ಸಾವನ್ನಪ್ಪಿದ್ದರು.