ನವದೆಹಲಿ, ಮೇ 25 (Daijiworld News/MB) : ಈದ್ ಹಬ್ಬದ ಪ್ರಯುಕ್ತ ದೇಶದ ಜನತೆಗೆ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಕರ್ನಾಟಕ ರಾಜ್ಯ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ವಿಪಕ್ಷ ನಾಯಕ ಸಿದ್ಧರಾಮಯ್ಯ ಸೇರಿದಂತೆ ಹಲವು ಗಣ್ಯರು ಶುಭಾಶಯ ತಿಳಿಸಿದ್ದಾರೆ.
ಪ್ರಧಾನಿ ಮೋದಿ ಅವರು ಈದ್ ಶುಭಾಶಯ ಕೋರಿ ಟ್ವೀಟ್ ಮಾಡಿದ್ದು, ಈ ವಿಶೇಷ ಸಂದರ್ಭವು ಸಹಾನುಭೂತಿ, ಸಹೋದರತ್ವ ಮತ್ತು ಸಾಮರಸ್ಯದ ಮನೋಭಾವವನ್ನು ಮತ್ತಷ್ಟು ಹೆಚ್ಚಿಸಲಿ. ಎಲ್ಲರೂ ಆರೋಗ್ಯವಂತರಾಗಿ ಮತ್ತು ಸಮೃದ್ಧಿ ಹೊಂದುವಂತಾಗಲಿ ಎಂದು ಹೇಳಿದ್ದಾರೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಪ್ರತಿಯೊಬ್ಬರಿಗೂ ಈದ್ ಮುಬಾರಕ್ ಎಂದು ಟ್ವೀಟ್ ಮಾಡಿದ್ದಾರೆ.
ನಾಡಿನ ಸಮಸ್ತ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಹೃತ್ಪೂರ್ವಕ ಶುಭಕಾಮನೆಗಳು. ನಾಡಿಗೆ ಎದುರಾಗಿರುವ ಕೋವಿಡ್ ಸಂಕಷ್ಟಗಳು ಪರಿಹರಿಸಲಿ, ಎಲ್ಲರಿಗೂ ಸುಖ, ಶಾಂತಿ, ಸಮೃದ್ಧಿಯನ್ನು ದೇವರು ಕರುಣಿಸಲಿ ಎಂದು ಪ್ರಾರ್ಥಿಸೋಣ. ಎಲ್ಲರೂ ಮನೆಯೊಳಗೇ ಇದ್ದು, ಸುರಕ್ಷಿತವಾಗಿ ಹಬ್ಬವನ್ನು ಆಚರಿಸಿ. ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಟ್ವೀಟ್ ಮಾಡಿದ್ದಾರೆ.
ಪವಿತ್ರ ಈದ್ ಉಲ್ ಫಿತರ್ ಹಬ್ಬ ಸಾರುವ ಸ್ನೇಹ, ತ್ಯಾಗ ಮತ್ತು ಭಾತೃತ್ವದ ಸಂದೇಶವನ್ನು ನಾವೆಲ್ಲ ಅರಿತು ಅಳವಡಿಸಿಕೊಂಡು ಬಾಳೋಣ. ನಾಡಿನ ನನ್ನ ಎಲ್ಲ ಮುಸ್ಲಿಮ್ ಬಂಧುಗಳಿಗೆ ಹಬ್ಬದ ಶುಭಾಶಯಗಳು ಎಂದು ವಿಪಕ್ಷ ನಾಯಕ ಸಿದ್ಧರಾಮಯ್ಯ ಅವರು ಶುಭಕೋರಿದ್ದಾರೆ.