ಬಾಲಾಕೋಟ್, ಮೇ 26 (DaijiworldNews/PY) : ಜಮ್ಮು-ಕಾಶ್ಮೀರದ ಪೂಂಚ್ ಜಿಲ್ಲೆಯ ಬಾಲಾಕೋಟ್ ಪ್ರದೇಶದಲ್ಲಿ ಪಾಕಿಸ್ತಾನ ಸೇನೆ ಇಂದು ಮುಂಜಾನೆ ಕದನ ವಿರಾಮ ಉಲ್ಲಂಘಿಸಿದೆ.
ಬಾಲಾಕೋಟ್ ವಲಯದ ನಿಯಂತ್ರಣ ರೇಖೆಯಲ್ಲಿ ಪಾಕಿಸ್ತಾನ ಸೇನೆಯು ಸಣ್ಣ ಗಾತ್ರದ ಶಸ್ತ್ರಾಸ್ತ್ರಗಳಿಂದ ಗುಂಡು ಹಾರಿಸಿದ್ದು, ಶೆಲ್ ದಾಳಿ ನಡೆಸುವ ಮೂಲಕ ಅಪ್ರಚೋದಿತ ಕದನ ವಿರಾಮ ಉಲ್ಲಂಘನೆ ಮಾಡಿದೆ.
ಪಾಕಿಸ್ತಾನದ ಕದನ ವಿರಾಮ ಉಲ್ಲಂಘನೆಗೆ ಭಾರತ ಸೇನೆಯು ಸೂಕ್ತವಾಗಿ ಪ್ರತಿಕ್ರಿಯೆ ನೀಡಿದೆ.