ಬೆಂಗಳೂರು, ಮೇ 26 (DaijiworldNews/PY) : ಮಾಗಡಿಯಲ್ಲಿ ಕೆಎಸ್ಆರ್ಟಿಸಿ ಬಸ್ ಚಾಲಕರೊಬ್ಬರಿಗೆ ಕೊರೊನಾ ಸೋಂಕು ದೃಢಪಟ್ಟಿರುವ ಹಿನ್ನೆಲೆ ಚಾಲಕನ ಸಂಪರ್ಕಕ್ಕೆ ಬಂದ ಸಾರಿಗೆ ಸಂಸ್ಥೆಯ ಸಿಬ್ಬಂದಿಯನ್ನೂ ಪರೀಕ್ಷೆಗೆ ಒಳಪಡಿಸಲಾಗುವುದು ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಸ್ನಲ್ಲಿ ಅವರ ಜೊತೆ ಪ್ರಯಾಣ ಮಾಡಿದವರು ಹಾಗೂ ಕುಟುಂಬದ ಸದಸ್ಯರನ್ನೂ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗುವುದು. ಇನ್ನು ಕೆಂಪು ವಲಯ ಹಾಗೂ ಕಂಟೈನ್ಮೆಂಟ್ ವಲಯಗಳಿಂದ ಬಂದು ಕೆಲಸ ಮಾಡುತ್ತಿರುವರನ್ನೂ ಹಾಗೂ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗುವುದು ಎಂದಿದ್ದಾರೆ.
ರಾಜ್ಯ ರಸ್ತೆ ಸಾರಿಗೆ ಸಿಬ್ಬಂದಿ ಭಯಪಡುವ ಅಗತ್ಯವಿಲ್ಲ. ಅಧಿಕ ಸಂಖ್ಯೆಯಲ್ಲಿ ಪರೀಕ್ಷೆ ನಡೆಸಲು ಎಲ್ಲಾ ರೀತಿಯಾದ ಸಿದ್ದತೆ ಕೈಗೊಳ್ಳಲಾಗಿದೆ. ಎಂದು ತಿಳಿಸಿದ್ದಾರೆ.
ಆಯುಷ್ ವೈದ್ಯರ ಬೇಡಿಕೆಗಳನ್ನು ಪರಿಶೀಲನೆ ಮಾಡಿ ಸರ್ಕಾರಕ್ಕೆ ವರದಿಕೊಡುವ ಸಂಬಂಧ ಒಂದು ಸಮಿತಿಯನ್ನು ರಚಿಸುತ್ತೇವೆ. ವರದಿ ಸಿಕ್ಕಿದ ಬಳಿಕ ಸೂಕ್ತ ಕ್ರಮವನ್ನು ಕೈಗೊಳ್ಳಲಾಗುವುದು. ಅಯುಷ್ ವೈದ್ಯ ಪದ್ಧತಿಗೆ ಒತ್ತು ಕೊಡುವಂತೆ ಪ್ರಧಾನಿ ಮೋದಿ ಅವರುವ ಸೂಚನೆ ನೀಡಿದ್ದಾರೆ. ರಾಜ್ಯ ಸರ್ಕಾರ ಅದಕ್ಕೆ ಆದ್ಯತೆ ನೀಡಲಿದೆ ಎಂದು ಹೇಳಿದರು.