ಮುಂಬೈ, ಮೇ 26 (Daijiworld News/MB) : ಉದ್ಧವ್ ಠಾಕ್ರೆ ಮತ್ತು ಪವಾರ್ ನಡುವೆ ಚರ್ಚೆ ನಡೆದಿದ್ದು ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಡಳಿತ ಹೇರುವ ಪ್ರಶ್ನೆಯೇ ಇಲ್ಲ ಎಂದು ಶಿವಸೇನೆ ತಿಳಿಸಿದೆ.
ಈ ಬಗ್ಗೆ ಮಾತನಾಡಿರುವ ಶಿವಸೇನೆ ವಕ್ತಾರ ಹಾಗೂ ಸಂಸದ ಸಂಜಯ್ ರಾವತ್ ಅವರು, ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಡಳಿತ ಹೇರುವ ಪ್ರಶ್ನೆಯೇ ಇಲ್ಲ. ಉದ್ಧವ್ ಠಾಕ್ರೆ ಮತ್ತು ಪವಾರ್ ನಡುವೆ ಚರ್ಚೆ ನಡೆದಿದ್ದು ಈ ಸಂದರ್ಭದಲ್ಲಿ ರಾಷ್ಟ್ರಪತಿ ಆಡಳಿತ ಹೇರಿಕೆಯ ಬಗ್ಗೆ ಯಾವ ಮಾತುಕತೆಯೂ ನಡೆದಿಲ್ಲ ಎಂದು ಹೇಳಿದ್ದಾರೆ.
ಪ್ರಸ್ತುತ ಇಡೀ ದೇಶದಲ್ಲೇ ಕೊರೊನಾ ಸೋಂಕು ಹರಡಿರುವಾಗ ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಹೇರಿಕೆ ಮಾಡಬೇಕು ಎಂಬುದು ಸರಿಯಲ್ಲ. ಅಷ್ಟೇ ಅಲ್ಲದೆ ಈ ಕುರಿತಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಗಡ್ಕರಿ ಅವರಿಂದಲೂ ನಾನು ಈ ಬಗ್ಗೆ ಯಾವ ಮಾತುಕತೆಯನ್ನು ಕೇಳಿಲ್ಲ. ಹೀಗಿರುವಾಗ ಇಂತಹ ಊಹಾಪೋಹ ವಿಚಾರಗಳನ್ನು ಹಬ್ಬಿಸುತ್ತಿರುವವರು ಯಾರು ಎಂದು ತಿಳಿಯುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.