ಲುಧಿಯಾನ, ಮೇ 26 (Daijiworld News/MB) : ಲುಧಿಯಾನ ರೈಲ್ವೆ ನಿಲ್ದಾಣದಲ್ಲಿ ನಿಯೋಜನೆ ಮಾಡಲಾಗಿದ್ದ ಏಳು ಮಂದಿ ರೈಲ್ವೆ ರಕ್ಷಣಾ ಪಡೆ (ಆರ್ಪಿಎಫ್) ಸಿಬ್ಬಂದಿಗಳಿಗೆ ಕೊರೊನಾ ಪಾಸಿಟಿವ್ ವರದಿ ಬಂದಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಆರ್ಪಿಎಫ್ ಮಹಾನಿರ್ದೇಶಕರು, ಲುಧಿಯಾನ ರೈಲ್ವೆ ನಿಲ್ದಾಣದಲ್ಲಿ ನಿಯೋಜಿಸಲಾಗಿದ್ದ ಆರ್ಪಿಎಫ್ ಸಿಬ್ಬಂದಿಗಳ ಕೊರೊನಾ ಪರೀಕ್ಷೆ ನಡೆಸಲಾಗಿದ್ದು ಏಳು ಆರ್ಪಿಎಫ್ ಸಿಬ್ಬಂದಿಗಳಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಈ ಕಾರಣದಿಂದಾಗಿ ಈಗಾಗಲೇ 100 ಜನರನ್ನು ಕ್ವಾರಂಟೈನ್ಗೆ ಒಳಪಡಿಸಲಾಗಿದೆ ಎಂದು ತಿಳಿಸಿದ್ದಾರೆ.
ಪಂಜಾಬ್ನಲ್ಲಿ ಈವರೆಗೆ 2,081ಕ್ಕೆ ಕೊರೊನಾ ಪ್ರಕರಣಗಳು ದಾಖಲಾಗಿದ್ದು 40 ಮಂದಿ ಕೊರೊನಾ ಸೋಂಕಿತರು ಸಾವನ್ನಪ್ಪಿದ್ದಾರೆ. ಈವರೆಗೆ 1898 ಮಂದಿ ಕೊರಾನಾ ಸೋಂಕಿತರು ಗುಣಮುಖರಾಗಿದ್ದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.