ಬೆಂಗಳೂರು, ಮೇ 26 (Daijiworld News/MB) : ದೇಶಾದ್ಯಂತ ಕೊರೊನಾ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಜಾರಿಯಲ್ಲಿರುವ ಲಾಕ್ಡೌನ್ ಸಡಿಲಿಕೆಯಾಗಿದ್ದು ಇದೀಗ ಧಾರ್ಮಿಕ ದತ್ತಿ ಇಲಾಖೆ ಅಧೀನದಲ್ಲಿರುವ ಎಲ್ಲಾ ದೇವಾಲಯಗಳಲ್ಲಿ ಜೂನ್ 1ರಿಂದ ಪೂಜೆ ಪುನಸ್ಕಾರ ನಡೆಸಲು ಕೆಲವೊಂದು ಷರತ್ತುಗಳೊಂದಿಗೆ ಅವಕಾಶ ನೀಡಲಾಗುವುದು ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಭಕ್ತರು ಜೂನ್ 1 ರಿಂದ ಸಾಮಾಜಿಕ ಅಂತರ ಕಾಯ್ದುಕೊಂಡು, ಶುಚಿತ್ವ ಕಾಪಾಡಿಕೊಂಡು ದೇವರ ದರ್ಶನ ಪಡೆಯಲು ಅವಕಾಶ ನೀಡಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.
ಲಾಕ್ಡೌನ್ ಕಾರಣದಿಂದಾಗಿ ದೇವಾಲಯಗಳಿಗೆ ಭಕ್ತರ ಪ್ರವೇಶ ನಿರ್ಬಂಧಿಸಿರುವ ಹಿನ್ನೆಲೆಯಲ್ಲಿ ಇತ್ತೀಚೆಗಷ್ಟೇ ಮುಜರಾಯಿ ಇಲಾಖೆ ಆನ್ಲೈನ್ ಸೇವೆ ಪ್ರಾರಂಭ ಮಾಡಿತ್ತು. ಇದೀಗ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುತ್ತಿದೆ ಎಂದು ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.