ಬೆಂಗಳೂರು, ಮೇ 27 (Daijiworld News/MSP): ಲಾಕ್ ಡೌನ್ ನಿಂದ ಬಾಗಿಲು ಹಾಕಿದ್ದ ರಾಜ್ಯದ ದೇವಾಲಯಗಳಲ್ಲಿ ಇನು ಭಕ್ತರಿಗೆ ದರ್ಶನ ಭಾಗ್ಯ ಸಿಗಲಿದೆ. ಜೂ.1 ರಿಂದ ರಾಜ್ಯದ ದೇವಸ್ಥಾನಗಳನ್ನು ತೆರೆಯಲು ಸರ್ಕಾರ ಅವಕಾಶ ನೀಡಿದೆ.
ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ದೇವಸ್ಥಾನಗಳನ್ನು ತೆರೆಯುವುದರ ಕುರಿತು ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಹೇಳಿದ್ದಾರೆ.
ಜೂ.1 ರಿಂದ ಪೂಜೆ, ಸೇವಾದಿಗಳಿಗೆ ಅನುಮತಿ ನೀಡಲು ತೀರ್ಮಾನಿಸಲಾಗಿದೆ. ಹಾಗೆಯೇ ಕಡ್ಡಾಯವಾಗಿ ಶುಚಿತ್ವ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕಾಗುತ್ತದೆ. ಆದರೆ ಸದ್ಯಕ್ಕೆ ಜಾತ್ರೆ, ಸಮಾರಂಭಗಳಿಗೆ ಅವಕಾಶ ಇಲ್ಲ ನೀಡಲಾಗಿಲ್ಲ. ದೇವಲಾಯಗಳಲ್ಲಿ ಅಗತ್ಯ ಪೂರ್ವಭಾವಿ ಸಿದ್ಧತೆ ಮಾಡಿಕೊಳ್ಳಲು ಸೂಚನೆ ನೀಡಲಾಗಿದೆ ಎಂದರು.
ನಾಳೆಯಿಂದ ರಾಜ್ಯ 52 ದೇವಸ್ತಾನಗಳ ಆನ್ ಲೈನ್ ಸೇವೆಗೆ ಅವಕಾಶ ನೀಡಲಾಗಿದೆ ಎಂದ ಅವರು ಮಸೀದಿ, ಚರ್ಚ್ ತೆರೆಯುವ ಬಗ್ಗೆ ಇನ್ನು ನಿರ್ಧಾರವಾಗಿಲ್ಲ ಎಂದರು.