ಚೆನ್ನೈ, ಮೇ 27 (Daijiworld News/MB) : ತಮಿಳುನಾಡಿನಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಲ್ಲಿದ್ದು ನೋಕಿಯಾ ಫೋನ್ ತಯಾರಿಕಾ ಘಟಕದ 42 ಮಂದಿಗೆ ಸೋಂಕು ದೃಢಪಟ್ಟಿದೆ. ಈ ಹಿನ್ನಲೆಯಲ್ಲಿ ನೋಕಿಯಾ ಫೋನ್ ತಯಾರಿಕಾ ಘಟಕವನ್ನು ಸ್ಥಗಿತ ಮಾಡಲಾಗಿದೆ.
ಕಳೆದ ವಾರವಷ್ಟೇ ತಮಿಳುನಾಡಿನ ಶ್ರೀಪೆರಂಬದೂರಿನಲ್ಲಿರುವ ನೋಕಿಯಾ ಫೋನ್ ತಯಾರಿಕಾ ಘಟಕವನ್ನು ಸೀಮಿತ ಸಿಬ್ಬಂದಿಗಳೊಂದಿಗೆ ಸಾಮಾಜಿಕ ಅಂತರ ಕಾಯ್ದುಕೊಂಡು ಎಲ್ಲಾ ಸುರಕ್ಷಿತ ಕ್ರಮಗಳೊಂದಿಗೆ ಆರಂಭ ಮಾಡಲಾಗಿದ್ದು ಇದೀಗ ನೌಕರರಲ್ಲಿ ಸೋಂಕು ದೃಢಪಟ್ಟ ಕಾರಣದಿಂದಾಗಿ ಮತ್ತೆ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿದೆ. ಅಗತ್ಯ ಸುರಕ್ಷಿತ ಕ್ರಮದೊಂದಿಗೆ ಅತಿ ಶೀಘ್ರದಲ್ಲಿ ಘಟಕವನ್ನು ಪುನರ್ ಆರಂಭ ಮಾಡಲಾಗುತ್ತದೆ ಎಂದು ವರದಿಯಾಗಿದೆ.
ಈ ಹಿಂದೆ ದೆಹಲಿಯಲ್ಲಿ ಒಪ್ಪೊ ಮೊಬೈಲ್ ತಯಾರಿಕಾ ಕಂಪನಿಯ 9 ನೌಕರರಲ್ಲಿ ಕೊರೊನಾ ದೃಢಪಟ್ಟಿದ್ದು ಆ ಘಟಕವೂ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಿತ್ತು.