ನವದೆಹಲಿ, ಮೇ 28 (DaijiworldNews/PY) : ದೇಶಾದ್ಯಂತ ಕಳೆದ 24 ಗಂಟೆಗಳಲ್ಲಿ 6,566 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿದ್ದು, ಕೊರೊನಾ ಸೋಂಕಿನಿಂದ 194 ಮಂದಿ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.
ದೇಶದಲ್ಲಿ ಕೊರೊನಾ ಸೋಂಕಿನ ಹಿನ್ನೆಲೆ ಸಾವನ್ನಪ್ಪಿದವರ ಸಂಖ್ಯೆ 4,531ಕ್ಕೆ ತಲುಪಿದ್ದು, ಇಲ್ಲಿಯವರೆಗೆ ಮೃತಪಟ್ಟವರ ಸಂಖ್ಯೆ 1,58,333 ಆಗಿದೆ. 86,110 ಕೊರೊನಾ ಪ್ರಕರಣಗಳು ಕ್ರಿಯಾಶೀಲವಾಗಿದ್ದು, 67,692 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.
ಗುಜರಾತ್ನಲ್ಲಿ 938, ಮಧ್ಯ ಪ್ರದೇಶದಲ್ಲಿ 313, ದೆಹಲಿಯಲ್ಲಿ 303, ಮಹಾರಾಷ್ಟ್ರದಲ್ಲಿ 1,897 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ.