ನವದೆಹಲಿ, ಮೇ 28 (Daijiworld News/MB) : ಕೊರೊನಾ ಲಕ್ಷಣಗಳು ಕಂಡು ಬಂದ ಕಾರಣದಿಂದಾಗಿ ಬಿಜೆಪಿ ರಾಷ್ಟ್ರೀಯ ವಕ್ತಾರ ಸಂಬಿತ್ ಪಾತ್ರಾ ಗುರುಗಾಂವ್ನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ.
ಅವರು ಗುರುಂಗಾವ್ನ ಮೇದಾಂತ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಮಾಧ್ಯಮದಲ್ಲಿ ಹೆಚ್ಚಾಗಿ ಸುದ್ದಿಯಾಗುವ ಸಂಬಿತ್ ಪಾತ್ರಾ ಅವರು .ಬಿಜೆಪಿಯಲ್ಲಿ ಪ್ರಮುಖ ನಾಯಕರಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿದ್ದಾರೆ.