ಬೆಂಗಳೂರು,ಮೇ 29 (Daijiworld News/MSP): ಬಿಜೆಪಿಯಲ್ಲಿ ರಾಜ್ಯಸಭೆ ಟಿಕೆಟ್ ಗಾಗಿ ಪೈಪೋಟಿ ಪ್ರಾರಂಭವಾಗಿದೆ. ಈ ಮಧ್ಯೆ ಗುರುವಾರ ರಾತ್ರಿ 25 ಕ್ಕೂ ಹೆಚ್ಚು ಬಿಜೆಪಿ ಶಾಸಕರು ಸೇರಿ ಸಭೆ ನಡೆಸಿರುವ ವಿಚಾರ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.
ಮೇಲ್ನೋಟಕ್ಕೆ ರಾಜ್ಯಸಭೆ ಟಿಕೆಟ್ ಮತ್ತು ಮಂತ್ರಿಸ್ಥಾನಕ್ಕಾಗಿ ಕೆಲವು ಶಾಸಕರು ಸಭೆ ನಡೆಸಿದ್ದಾರೆ ಎಂದು ಬಿಂಬಿತವಾಗಿದ್ದರೂ, ಇದರ ಹಿಂದೆ ಬೇರೆಯದೇ ಉದ್ದೇಶವಿದೆ ಎನ್ನಲಾಗಿದೆ.
ಮೊದಲು ಲೋಕಸಭೆ ಟಿಕೆಟ್ ಅಕಾಂಕ್ಷಿಯಾಗಿದ್ದ ರಮೇಶ್ ಕತ್ತಿ ಅವರಿಗೆ ಟಿಕೆಟ್ ಕೈತಪ್ಪಿತ್ತು. ಬಳಿಕ ಉಮೇಶ್ ಕತ್ತಿ ಅವರಿಗೆ ಸಚಿವ ಸ್ಥಾನವೂ ಕೈತಪ್ಪಿತು. ಆಗ ಯಡಿಯೂರಪ್ಪ ನೀಡಲಾಗಿದ್ದ ಭರವಸೆಯಂತೆ ರಮೇಶ್ ಕತ್ತಿಯವರಿಗೆ ರಾಜ್ಯಸಭೆ ಟಿಕೆಟ್ ಕೊಡಬೇಕು ಮತ್ತು ಉಮೇಶ್ ಕತ್ತಿ ಅವರಿಗೆ ಸಚಿವ ಸ್ಥಾನ ನೀಡಬೇಕೆಂಬ ಬೇಡಿಕೆ ಮುಂದಿಡಲಾಗಿದೆ ಎನ್ನಲಾಗಿದೆ.
ರಮೇಶ್ ಕತ್ತಿಗೆ ರಾಜ್ಯಸಭೆ ಟಿಕೆಟ್ ವಿಚಾರ, ಮಂತ್ರಿಸ್ಥಾನ ವಿಚಾರ ಮುಂದಿಟ್ಟುಕೊಂಡು ಸಭೆ ನಡೆಸಿದ್ದು, ಸಿಎಂಗೆ ಬೇಡಿಕೆ ಸಂದೇಶ ರವಾನಿಸಲಾಗಿದೆ. ಆದರೆ, ಮೇಲ್ನೋಟಕ್ಕೆ ರಾಜ್ಯಸಭೆ ಟಿಕೆಟ್ ಮತ್ತು ಮಂತ್ರಿಸ್ಥಾನಕ್ಕಾಗಿ ಕೆಲವು ಶಾಸಕರು ಸಭೆ ನಡೆಸಿದ್ದಾರೆ ಎಂದು ಬಿಂಬಿತವಾಗಿದ್ದರೂ, ಇದರ ಹಿಂದೆ ಬೇರೆಯದೇ ಉದ್ದೇಶವಿದೆ ಎನ್ನಲಾಗಿದೆ.
ಬಿಜೆಪಿ ಹಿರಿಯ ನಾಯಕರಾದ ಬಸವನಗೌಡ ಪಾಟೀಲ್ ಯತ್ನಾಳ್, ಉಮೇಶ್ ಕತ್ತಿ ಸೇರಿದಂತೆ ಹಲವು ನಾಯಕರು ಉತ್ತರ ಕರ್ನಾಟಕದ ಭಾಗದ ಬಿಜೆಪಿ ಶಾಸಕರ ಸಭೆ ನಡೆಸಿ ಬಲಾಬಲ ಪ್ರದರ್ಶಿಸುವ ಮೂಲಕ ಮುಂದಿನ ರಾಜಕೀಯ ಹೆಜ್ಜೆ ಇಡಲು ಮುಂದಾಗಿದ್ದಾರೆ. ಈ ಮೂಲಕ ಮುಖ್ಯಮಂತ್ರಿ ಮೇಲೆ ಒತ್ತಡ ಹೇರುವ ತಂತ್ರ ಅನುಸರಿಸಿದ್ದಾರೆ ಎನ್ನಲಾಗಿದೆ.