ಬೆಂಗಳೂರು, ಮೇ 29 (DaijiworldNews/PY) : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನಿವಾಸಿ ಕನ್ನಡಿಗರೊಂದಿಗೆ ವಿಡಿಯೋ ಕಾನ್ಪರೆನ್ಸ್ ಮೂಲಕ ಸಂವಾದ ನಡೆಸಿದ್ದಾರೆ.
ಕೊರೊನಾ ಸೋಂಕಿನಿಂದ ಉಂಟಾಗಿರುವ ಸಂಕಷ್ಟ ಹಾಗೂ ವಿವಿಧ ದೇಶದಲ್ಲಿ ನೆಲೆಸಿರುವ ಕನ್ನಡಿಗರ ಸುರಕ್ಷತೆಯ ವಿಚಾರವಾಗಿ ಸಿದ್ದರಾಮಯ್ಯ ಅವರು ವಿಡಿಯೋ ಕಾನ್ಪರೆನ್ಸ್ ಮೂಲಕ ಮಾಹಿತಿ ಪಡೆದುಕೊಂಡಿದ್ದಾರೆ.
ಬೆಲ್ಜಿಯಂ, ನೆದರ್ಲ್ಯಾಂಡ್, ಫಿನ್ಲ್ಯಾಂಡ್, ಅಮೆರಿಕ ಹಾಗೂ ದುಬೈನಲ್ಲಿ ನೆಲೆಸಿರುವ ಕನ್ನಡಿಗರೊಂದಿಗೆ ಮಾತನಾಡುತ್ತಿರುವ ಸಂದರ್ಭದ ವಿಡಿಯೋವೊಂದನ್ನಯ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಬೆಲ್ಜಿಯಂ, ನೆದರ್ಲ್ಯಾಂಡ್ಸ್, ಫಿನ್ಲ್ಯಾಂಡ್, ಅಮೆರಿಕ ಹಾಗೂ ದುಬೈನಲ್ಲಿ ನೆಲೆಸಿರುವ ಕನ್ನಡಿಗರ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತುಕತೆ ನಡೆಸಿದ ಸಂದರ್ಭ.