ಬೆಂಗಳೂರು, ಮೇ 29 (DaijiworldNews/PY) : ಯಾರು ಅಸಮಾಧಾನಗೊಂಡಿದ್ದಾರೆ ಏನು ಎನ್ನುವುದು ನನಗೆ ಗೊತ್ತಿಲ್ಲ. ಶಾಸಕ ತಿಪ್ಪಾರೆಡ್ಡಿ ಅಸಮಾಧಾನ ವ್ಯಕ್ತಪಡಿಸಿರುವುದು ಗೊತ್ತಿಲ್ಲ. ಮಾಧ್ಯಮದ ಮೂಲಕ ಮಾತ್ರ ವಿಚಾರ ತಿಳಿದಿದ್ದೇನೆ. ನನಗೇನೂ ಗೊತ್ತಿಲ್ಲ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.
ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ, ಉಮೇಶ್ ಕತ್ತಿ, ಮುರುಗೇಶ್ ನಿರಾಣಿ ಅವರು ಬಿ.ಎಸ್.ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲು ನೇತೃತ್ವವಹಿಸಿದ್ದಾರೆ. ನಾನು ಮಾಧ್ಯಮಗಳಲ್ಲಿ ಶಾಸಕರ ಸಭೆ ನಡೆಸಿದ್ದಾರೆ ಎನ್ನುವ ಬಗ್ಗೆ ಕೇಳಿ ತಿಳಿದಿದ್ದೇನೆ. ಈ ವಿಚಾರದ ಬಗ್ಗೆ ನನಗೇನೂ ನನಗೇನೂ ಗೊತ್ತಿಲ್ಲ ನನಗೇನೂ ಗೊತ್ತಿಲ್ಲ ಎಂದು ತಿಳಿಸಿದರು.