ಬೆಂಗಳೂರು, ಮೇ 30 (Daijiworld News/MSP): ಪಾದರಾಯನಪುರದ ಕೊರೊನಾ ವಾರಿಯರ್ಸ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಎಲ್ಲ 126 ಆರೋಪಿಗಳಿಗೆ ಹೈಕೋರ್ಟ್ ಜಾಮೀನು ನೀಡಿದೆ.
ಪಾದರಾಯನಪುರದ ಕೊರೊನಾ ವಾರಿಯರ್ಸ್ ಮೇಲಿನ ಹಲ್ಲೆ ಪ್ರಕರಣ ಇಡೀ ದೇಶದ ಗಮನ ಸೆಳೆದಿತ್ತು. ಇದೀಗ ಹೈಕೋರ್ಟ್ ನ್ಯಾಯಮೂರ್ತಿ ಜಾನ್ ಮೈಕಲ್ ಕುನ್ಹಾ ಪೀಠವು ಕಾಯ್ದಿರಿಸಿದ್ದ ಆದೇಶವನ್ನು ಶುಕ್ರವಾರ ಪ್ರಕಟಿಸಿದ್ದು ಷರತ್ತುಬದ್ಧ ಜಾಮೀನು ನೀಡಿ ಆದೇಶಿಸಿದೆ.
ಜಾಮೀನು ನೀಡುವ ಸಂದರ್ಭ ನ್ಯಾಯಾಲಯ ಹಲವು ಷರತ್ತುಗಳನ್ನು ವಿಧಿಸಿದ್ದು, ಆರೋಪಿಗಳು 1 ಲಕ್ಷ ರೂಪಾಯಿ ಶ್ಯೂರಿಟಿ ಬಾಂಡ್ ನೀಡಬೇಕು. ಎಲ್ಲರೂ ಕೊರೋನಾ ಟೆಸ್ಟ್ ಮಾಡಿಸಿಕೊಳ್ಳಬೇಕು. ಕೊರೋನಾ ಮಾರ್ಗಸೂಚಿ ಪಾಲಿಸಬೇಕು. ಇಲ್ಲವಾದಲ್ಲಿ ಜಾಮೀನು ರದ್ದು ಮಾಡಲಾಗುವುದು ಎಂಬ ಷರತ್ತುಗಳನ್ನು ವಿಧಿಸಿದೆ. ಅಲ್ಲದೆ ಪ್ರಕರಣದ ಆರೋಪಿಗಳಿಗೆ ಕೊರೋನಾ ಪಾಸಿಟಿವ್ ಇದ್ದರೆ, ಸರ್ಕಾರದ ನಿಯಮದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ನ್ಯಾಯಾಲಯ ತಿಳಿಸಿದೆ.